ಕಸ ಗುಡಿಸುವ ನೆಪದಲ್ಲಿ ಕಾಂಗ್ರೆಸ್ ಹಣ ದೋಚುವ ಯತ್ನ: ವಿಜಯೇಂದ್ರ ಕಿಡಿ

Sampriya
ಬುಧವಾರ, 19 ನವೆಂಬರ್ 2025 (10:49 IST)
ಬೆಂಗಳೂರು: ಕಸ ಗುಡಿಸುವ ನೆಪದಲ್ಲಿ ಕಮಿಷನ್ ಹಣವನ್ನು ಬಾಚಲು ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆರೋಪ ಮಾಡಿದರು. 

ರಾಜ್ಯ ಕಾಂಗ್ರೆಸ್ ಸರ್ಕಾರ 7 ವರ್ಷಕ್ಕೆ 46ಯಂತ್ರಗಳನ್ನು ₹613ಕೋಟಿಗೆ ಬಾಡಿಗೆ ಪಡೆದಿರುವ ವಿಚಾರವಾಗಿ ಕಾಂಗ್ರೆಸ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ವಿಜಯೇಂದ್ರ ಅವರು ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. 

ಬೆಂಗಳೂರಿನ ಕಸ ಗುಡಿಸುವ ನೆಪದಲ್ಲಿ ಕಮಿಷನ್ ಹಣವನ್ನು ಬಾಚಲು ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಾಗಿದೆ. ಇಲ್ಲದಿದ್ದಲ್ಲಿ ಬೆಂಗಳೂರಿನ ಕಸ ಗುಡಿಸುವುದಕ್ಕೆ 617 ಕೋಟಿ ರೂ ಬಾಡಿಗೆ ಕಟ್ಟಲು ಮುಂದಾಗಿರುವ ಇವರ ನಿರ್ಧಾರದ ಹಿಂದಿನ ತರ್ಕಕ್ಕೆ, ಮೊದಲು ಕಾಂಗ್ರೆಸ್‌
 ಸರ್ಕಾರ ಉತ್ತರಿಸಲಿ. 

46 ಯಂತ್ರಗಳನ್ನು 7 ವರ್ಷಕ್ಕೆ ₹613 ಕೋಟಿಗೆ ಬಾಡಿಗೆಗೆ ಪಡೆಯುತ್ತಿದೆ, ಅಂದರೆ ಇದು ಪ್ರತಿ ಯಂತ್ರಕ್ಕೆ ವಾರ್ಷಿಕ ₹1.9 ಕೋಟಿ ಬಾಡಿಗೆಯಾಗುತ್ತದೆ. ಒಂದು ಯಂತ್ರದ ಮಾರುಕಟ್ಟೆ ಬೆಲೆ ಸುಮಾರು ₹1.5 ರಿಂದ 3 ಕೋಟಿ ರೂ. ಎನ್ನಲಾಗಿದೆ. ಒಂದು ಯಂತ್ರವನ್ನು 7 ವರ್ಷಕ್ಕೆ ಬಾಡಿಗೆಗೆ ಪಡೆಯಲು, ಅದನ್ನು ಹೊಸದಾಗಿ ಖರೀದಿಸುವುದಕ್ಕಿಂತಲೂ ದುಬಾರಿಯಾಗಿ ಜನರ ಹೆಚ್ಚಿನ ತೆರಿಗೆ ಹಣವನ್ನು ಸರ್ಕಾರ ಏಕೆ ಖರ್ಚು ಮಾಡುತ್ತಿದೆ? ತಾಂತ್ರಿಕ ಸಮಿತಿ 'ಖರೀದಿ'ಗೆ ಶಿಫಾರಸು ಮಾಡಿದರೂ, ದುಬಾರಿ 'ಬಾಡಿಗೆ' ಆಯ್ಕೆ ಮಾಡಿದ್ದು ಏಕೆ? 

BBMP ನೌಕರರಿಗೆ ಪಾವತಿಸಲು ಹಣವಿಲ್ಲದ ಕಾರಣ, ನಿರ್ವಹಣೆ ಇಲ್ಲದೆ ಈಗಾಗಲೇ 26 ಯಂತ್ರಗಳು ಬಳಕೆಯಾಗದೆ ಧೂಳು ತಿನ್ನುತ್ತಿವೆ. ಅದರ ಧೂಳು ತೆಗೆದು ಬಳಸಲು ಇವರಿಗೆ ಆಗುತ್ತಿಲ್ಲ. ಆದ್ದರಿಂದ ಈ 'ಧೂಳು-ಕಸ' ಭಾಗ್ಯದ ರೂವಾರಿಗಳು ಯಾರು ಎಂದು ರಾಜ್ಯ ಸರ್ಕಾರ ಮೊದಲು ಉತ್ತರಿಸಲಿ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Big Breaking: ಆಲ್ ಫಲಾಹ್ ಗ್ರೂಪ್‌ನ ಅಧ್ಯಕ್ಷ 13ದಿನ ಇಡಿ ಕಸ್ಟಡಿಗೆ

ಸ್ಫೋಟಕ್ಕೂ ಮುನ್ನಾ ಮನೆಗೆ ಭೇಟಿ ಕೊಟ್ಟ ಬಾಂಬರ್‌ ಉಮರ್ ಮಾಡಿದ್ದೇನು ಗೊತ್ತಾ

Karnataka Weather, ಚಳಿಯ ಜತೆಗೆ ರಾಜ್ಯದ ಈ ಭಾಗದಲ್ಲಿ ಇಂದು, ನಾಳೆ ಮಳೆ

ಇದೇ ಗುರುವಾರ, ಶುಕ್ರವಾರ ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಸಿಗಲ್ಲ

ಬೆಳಗಾವಿ ಕೃಷ್ಣಮೃಗ ಸಾವು ಪ್ರಕರಣ, ಬಂತು ಪ್ರಯೋಗಾಲಯದ ವರದಿ

ಮುಂದಿನ ಸುದ್ದಿ
Show comments