ಕಾಂಗ್ರೆಸ್ ಬೆಂಕಿಗೆ ತುಪ್ಪ ಹಾಕುವ ಕೆಲಸ ಮಾಡುತ್ತಿದೆ : ಸಿಎಂ

Webdunia
ಭಾನುವಾರ, 19 ಜೂನ್ 2022 (14:30 IST)
ಬೆಂಗಳೂರು : ಕಾಂಗ್ರೆಸ್ ಬೆಂಕಿಗೆ ತುಪ್ಪ ಹಾಕುವ ಕೆಲಸವನ್ನು ಇಡೀ ದೇಶದಲ್ಲಿ ಮಾಡುತ್ತಿದೆ ಎನ್ನುವುದಕ್ಕೆ ಖಾನಾಪುರ ಶಾಸಕರು ಧರಣಿ ಮಾಡುತ್ತಿರುವುದು ಸಾಕ್ಷಿಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಗ್ನಿಪಥ್ ಒಂದು ವಿನೂತನ ಕಾರ್ಯಕ್ರಮ. ಇಡೀ ಜಗತ್ತಿನಲ್ಲಿ ಯುವಕರಿಗೆ ಮಿಲಿಟರಿ ತರಬೇತಿ ನೀಡುವ ವ್ಯವಸ್ಥೆ ಇದೆ. 17 – 21 ವರ್ಷ ಉತ್ತಮ ತರಬೇತಿ ಪಡೆದರೆ, ಬೇರೆ ಅವಕಾಶಗಳು ಸಿಗುತ್ತವೆ. ಮಿಲಿಟರಿ ಹಾಗೂ ಅರೆಮಿಲಿಟರಿ ಪಡೆಗಳಲ್ಲಿ ಅವಕಾಶ ಸಿಗಲಿದೆ ಎಂದು ಹೇಳಿದರು.

ಸಶಕ್ತ ಯುವಕರ ಜನಸಂಖ್ಯೆಯನ್ನು ಸಿದ್ಧ ಮಾಡುವ ದೃಷ್ಟಿಯಿಂದ ಹಾಗೂ ಸಶಸ್ತ್ರ ಪಡೆಗಳಲ್ಲಿ ಯುವಶಕ್ತಿ ಯನ್ನು ತುಂಬುವ ಮಹತ್ವಾಕಾಂಕ್ಷೆ ಇದೆ. ಪರೀಕ್ಷೆ ಬರೆದವರಿಗೆ ಆತಂಕ ಇದೆ. ಅದನ್ನು ಕೇಂದ್ರ ಸರ್ಕಾರ ಗಮನಿಸಿ ಪರಿಹಾರ ನೀಡುವ ವಿಶ್ವಾಸವಿದೆ. ಆದರೆ ಈ ನೆಪದಲ್ಲಿ ರೈಲುಗಳಿಗೆ ಬೆಂಕಿ ಹಚ್ಚುವುದು, ಖಂಡಿತವಾಗಿಯೂ ಕ್ಷಮಿಸಲಾಗದ ಅಪರಾಧ.

ಪ್ರಯಾಣಿಕರಿಗೆ ತೊಂದರೆ, ಆಸ್ತಿಪಾಸ್ತಿ ನಷ್ಟವಾಗಿದೆ. ಜವಾಬ್ದಾರಿ ಇರುವವರು ಯಾರೂ ಈ ರೀತಿ ಮಾಡುವುದಿಲ್ಲ. ಇದೊಂದು ರಾಜಕೀಯ ಪ್ರೇರಿತ ಕೃತ್ಯ. ಜನ ಸ್ವಲ್ಪ ದಿನಗಳಲ್ಲಿಯೇ ಅರ್ಥ ಮಾಡಿಕೊಳ್ಳುತ್ತಾರೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಈ ಜಿಲ್ಲೆಗಳಲ್ಲಿ ಇಂದೂ ಮಳೆಯ ಸೂಚನೆ

ಪೌರಾಯುಕ್ತೆಗೆ ಧಮ್ಕಿ ಪ್ರಕರಣ, ಕೊನೆಗೂ ಕೈ ನಾಯಕ ರಾಜೀವ್ ಗೌಡ ಲಾಕ್‌

ಕರ್ನಾಟಕ ಬಾಂಗ್ಲಾ ನಿವಾಸಿಗಳ ತವರೂರು: ಅವರನ್ನು ಓಡಿಸಲು ಎಸ್‌ಐಆರ್ ಜಾರಿಗೊಳಿಸಲು ಯತ್ನಾಳ್ ಒತ್ತಾಯ

ಬಾಹ್ಯಾಕಾಶದಲ್ಲಿ ಭಾರತದ ಪತಾಕೆ ಹಾರಿಸಿದ ಗಗನಯಾತ್ರಿ ಶುಭಾಂಶು ಶುಕ್ಲಾಗೆ ಅಶೋಕ ಚಕ್ರ ಗೌರವ

ಮನರೇಗಾ ಉಳಿಸಲು ರಾಜಭವನ ಚಲೊ: ಕೇಂದ್ರ ಸರ್ಕಾರದ ವಿರುದ್ಧ ತೊಡೆತಟ್ಟಿದ ಡಿಕೆಶಿ

ಮುಂದಿನ ಸುದ್ದಿ
Show comments