Publish Date: Sun, 30 Oct 2022 (20:30 IST)
Updated Date: Sun, 30 Oct 2022 (20:33 IST)
ಮುಖ್ಯಮಂತ್ರಿ ಕಚೇರಿಯಿಂದಲೇ ಪತ್ರಕರ್ತರಿಗೆ ನಗದು ರೂಪದಲ್ಲಿ ಲಂಚ ನೀಡಲಾಗಿದೆ ಎಂದು ಕಾಂಗ್ರೆಸ್ ಪಕ್ಷವು ಮಾಡಿರುವ ಆರೋಪಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಅವರು, ಕಾಂಗ್ರೆಸ್ ಪಕ್ಷ ಸುಳ್ಳು ಸೃಷ್ಟಿಸುವ ಕೆಲಸ ಮಾಡುತ್ತಿದೆ. ಪತ್ರಕರ್ತರಿಗೆ ಗಿಫ್ಟ್ ಕೊಡಿ ಎಂದು ನಾನು ಯಾರಿಗೂ ಸೂಚಿಸಿಲ್ಲ. ಇದು ಕಾಂಗ್ರೆಸ್ ಟೂಲ್ ಕಿಟ್ನ ಮುಂದುವರಿದ ಭಾಗ. ಕಾಂಗ್ರೆಸ್ ಅವಧಿಯಲ್ಲಿ ಐ ಫೋನ್, ಚಿನ್ನದ ನಾಣ್ಯ ನೀಡಿದ್ದರು. ಈಗ ಆರೋಪ ಮಾಡಲು ಕಾಂಗ್ರೆಸ್ಗೆ ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿದರು. ಪತ್ರಕರ್ತರಿಗೆ ಹಣ ನೀಡಿದ ಆರೋಪ ಹೊರಿಸಿ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಲೋಕಾಯುಕ್ತರ ತನಿಖೆಯಲ್ಲಿ ಸತ್ಯಾಂಶ ಹೊರಬರಲಿದೆ. ಕಾಂಗ್ರೆಸ್ ಪಕ್ಷದ ಕರ್ನಾಟಕ ಉಸ್ತುವಾರಿ ಸುರ್ಜೇವಾಲ ತುಂಬಾ ಕೆಟ್ಟದಾಗಿ ಮಾತನಾಡಿದ್ದಾರೆ. ಅವರ ಹೇಳಿಕೆಯನ್ನು ನಾನು ಖಂಡಿಸುತ್ತೇನೆ ಎಂದು ಸ್ಪಷ್ಟಪಡಿಸಿದರು.
geetha
Publish Date: Sun, 30 Oct 2022 (20:30 IST)
Updated Date: Sun, 30 Oct 2022 (20:33 IST)