ಕಾಂಗ್ರೆಸ್​ ಸುಳ್ಳು ಸೃಷ್ಟಿಸುವ ಕೆಲಸ ಮಾಡುತ್ತಿದೆ- ಸಿಎಂ

Webdunia
ಭಾನುವಾರ, 30 ಅಕ್ಟೋಬರ್ 2022 (20:30 IST)
ಮುಖ್ಯಮಂತ್ರಿ ಕಚೇರಿಯಿಂದಲೇ ಪತ್ರಕರ್ತರಿಗೆ ನಗದು ರೂಪದಲ್ಲಿ ಲಂಚ ನೀಡಲಾಗಿದೆ ಎಂದು ಕಾಂಗ್ರೆಸ್​ ಪಕ್ಷವು ಮಾಡಿರುವ ಆರೋಪಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಅವರು, ಕಾಂಗ್ರೆಸ್​ ಪಕ್ಷ ಸುಳ್ಳು ಸೃಷ್ಟಿಸುವ ಕೆಲಸ ಮಾಡುತ್ತಿದೆ. ಪತ್ರಕರ್ತರಿಗೆ ಗಿಫ್ಟ್​ ಕೊಡಿ ಎಂದು ನಾನು ಯಾರಿಗೂ ಸೂಚಿಸಿಲ್ಲ. ಇದು ಕಾಂಗ್ರೆಸ್​​ ಟೂಲ್​ ಕಿಟ್​​ನ ಮುಂದುವರಿದ ಭಾಗ. ಕಾಂಗ್ರೆಸ್ ಅವಧಿಯಲ್ಲಿ ಐ ಫೋನ್​, ಚಿನ್ನದ ನಾಣ್ಯ ನೀಡಿದ್ದರು. ಈಗ ಆರೋಪ ಮಾಡಲು ಕಾಂಗ್ರೆಸ್​ಗೆ ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿದರು. ಪತ್ರಕರ್ತರಿಗೆ ಹಣ ನೀಡಿದ ಆರೋಪ ಹೊರಿಸಿ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಲೋಕಾಯುಕ್ತರ ತನಿಖೆಯಲ್ಲಿ ಸತ್ಯಾಂಶ ಹೊರಬರಲಿದೆ. ಕಾಂಗ್ರೆಸ್​ ಪಕ್ಷದ ಕರ್ನಾಟಕ ಉಸ್ತುವಾರಿ ಸುರ್ಜೇವಾಲ ತುಂಬಾ ಕೆಟ್ಟದಾಗಿ ಮಾತನಾಡಿದ್ದಾರೆ. ಅವರ ಹೇಳಿಕೆಯನ್ನು ನಾನು ಖಂಡಿಸುತ್ತೇನೆ ಎಂದು ಸ್ಪಷ್ಟಪಡಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕ್ರಿಸ್ಮಸ್‌ ರಜೆಗೆ ಬೆಂಗಳೂರಿನಿಂದ ವಿಜಯಪುರಕ್ಕೆ ತೆರಳುವ ಪ್ರಯಾಣಿಕರ ದಟ್ಟಣೆ ತಗ್ಗಿಸಲು ಬೈಪಾಸ್ ಮೂಲಕ ರೈಲು

ಹೈಕಮಾಂಡ್ ಆಂತರಿಕ ಕಚ್ಚಾಟವನ್ನು ಸರಿಪಡಿಸಬೇಕೆಂದ ಸತೀಶ್ ಜಾರಕಿಹೊಳಿ

ಮೋಸ್ಟ್‌ ವಾಟೆಂಡ್‌, ಡೇಜಂರಸ್‌ ನಕ್ಸಲ್‌ ಮುಖ್ಯಸ್ಥ ಗಣೇಶ್ ಉಯಿಕೆ ಇನ್ನಿಲ್ಲ, ಆಗಿದ್ದೇನು ಗೊತ್ತಾ

ಬಿಜೆಪಿ ಅಧಿಕಾರದ ಬಳಿಕ ಅಲ್ಪಸಂಖ್ಯಾತರ ವಿರುದ್ಧ ದ್ವೇಷದ ಭಾಷಣ ಹೆಚ್ಚಳ: ಎಂಕೆ ಸ್ಟಾಲಿನ್

ಹುಬ್ಬಳ್ಳಿ ಮರ್ಯಾದೆ ಹತ್ಯೆ ಪ್ರಕರಣ: ಜೈಲಿಗೆ ಹಾಕುವ ಅವಶ್ಯಕತೆಯೇ ಇಲ್ಲ, ಶೂಟೌಟ್ ಮಾಡಲಿ

ಮುಂದಿನ ಸುದ್ದಿ
Show comments