Select Your Language

Notifications

webdunia
webdunia
webdunia
webdunia

ಕಾಂಗ್ರೆಸ್‌ ನಾಯಕಿ, ನಟಿ ವಿದ್ಯಾ ಕೊಲೆ‌ ಪ್ರಕರಣ: ಆರೋಪಿ ಪತಿ ಎಸ್ಕೇಪ್

Congress leader no more

sampriya

ಮೈಸೂರು , ಮಂಗಳವಾರ, 21 ಮೇ 2024 (17:59 IST)
Photo By X
ಮೈಸೂರು: ಕಾಂಗ್ರೆಸ್‌ ನಾಯಕಿ, ನಟಿ ವಿದ್ಯಾ ಕೊಲೆ ಪ್ರಕರಣದ ಆರೋಪಿ ಆಕೆಯ ಪತಿ ಕೊಲೆ ಮಾಡಿ ಪರಾರಿಯಾಗಿದ್ದಾನೆ.

ನಿನ್ನೆ ತಡರಾತ್ರಿ ಮೈಸೂರು ಜಿಲ್ಲೆಯ ಬನ್ನೂರು ಬಳಿಯ ತುರಗನೂರಿನಲ್ಲಿ ಸ್ಥಳೀಯ ಕಾಂಗ್ರೆಸ್ ನಾಯಕಿ ವಿದ್ಯಾ ಅವರನ್ನು ಆಕೆಯ ಪತಿ ನಂದೀಶ್ ಸೋಮವಾರ ತಡರಾತ್ರಿ ಕೊಲೆ ಮಾಡಿ ಪರಾರಿಯಾಗಿರುವುದಾಗಿ ತಿಳಿದುಬಂದಿದೆ.

ಇನ್ನೂ ಕೊಲೆಗೆ ಕೌಟುಂಬಿಕ ಕಲಹ ಕಾರಣ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.
ವಿದ್ಯಾ ಅವರು ಮೈಸೂರು ನಗರ ಕಾಂಗ್ರೆಸ್ ಮಹಿಳಾ ಘಟಕದಲ್ಲಿ ಸಕ್ರಿಯರಾಗಿದ್ದರು. ಈ ಹಿಂದೆ ಬ್ಲಾಕ್ ಅಧ್ಯಕ್ಷರಾಗಿದ್ದ ಅವರು ಪ್ರಸ್ತುತ ನಗರ ಘಟಕದ ಪ್ರಧಾನ ಕಾರ್ಯದರ್ಶಿಯಾಗಿದ್ದರು. ಅದಲ್ಲದೆ ಸಿನಿಮಾದ ರಂಗದಲ್ಲೂ ಗುರುತಿಸಿಕೊಂಡಿದ್ದಾರೆ.


ನಿನ್ನೆ ತಡರಾತ್ರಿ ವಿದ್ಯಾ ಅವರು ತನ್ನ ಗಂಡನ ಮನೆಗೆ ಹೋಗಿದ್ದಾರೆ. ಈ ವೇಳೆ ಇಬ್ಬರ ನಡುವೆ ಜಗಳವಾಗಿತ್ತು. ಜಗಳದ ನಡುವೆ ನಂದೀಶ್ ಪತ್ನಿ ಮೇಲೆ ಹಲ್ಲೆ ನಡೆಸಿದ್ದರು. ತಲೆಗೆ ಬಲವಾದ ಗಾಯಗಳಾಗಿದ್ದರಿಂದ ವಿದ್ಯಾ ಮೃತಪಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ. ಬನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ದಲಿತರನ್ನು ವಂಚಿಸುವ ಮೀಸಲಾತಿ ಅಂಗೀಕಾರ: ಛಲವಾದಿ ನಾರಾಯಣಸ್ವಾಮಿ ಆಕ್ಷೇಪ