Webdunia - Bharat's app for daily news and videos

Install App

ನೋದಣಿಯಾಗದಿರುವ ಆರ್‌ಎಸ್‌ಎಸ್‌ ಭೂಗತ ಸಂಘಟನೆಯಲ್ಲವೇ: ಬಿಕೆ ಹರಿಪ್ರಸಾದ್‌

Sampriya
ಭಾನುವಾರ, 19 ಅಕ್ಟೋಬರ್ 2025 (13:57 IST)
ಬೆಂಗಳೂರು: ಸರ್ಕಾರಿ ಸ್ಥಳಗಳಲ್ಲಿ ಶಾಖೆ, ಸಾಂಘಿಕ್ ಅಥವಾ ಬೈಠಕ್ ಹೆಸರಿನಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆಗೆ ನಿಷೇಧ ಹೇರಬೇಕೆಂಬ ವಿಚಾರ ಸಂಬಂಧ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ನಡುವೆ ಜಟಾಪಟಿಗೆ ಕಾರಣವಾಗಿದೆ. 

ಇದೀಗ ಈ ವಿಚಾರ ಸಂಬಂಧ ವಿಧಾನ ಪರಿಷತ್ ಸದ್ಯ ಬಿಕೆ ಹರಿಪ್ರಸಾದ್ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ. 

ಪೋಸ್ಟ್‌ನಲ್ಲಿ ಹೀಗಿದೆ: ‘ಬಿ.ಎಲ್. ಸಂತೋಷ್‌ ಅವರೇ, ಕೈಯಲ್ಲಿ ದೊಣ್ಣೆ ಹಿಡಿದು ಜನರಲ್ಲಿ ಭಯ ಹುಟ್ಟಿಸಬಹುದೇ ಹೊರತು ಭರವಸೆ ಮೂಡಿಸಲು ಸಾಧ್ಯವಿಲ್ಲ. ದೇಶದ ಜನರಲ್ಲಿ ಆತ್ಮವಿಸ್ವಾಸ, ಧೈರ್ಯ, ಭರವಸೆ ಮೂಡಿಸಿರುವುದು ಬಾಬಾ ಸಾಹೇಬರು ನೀಡಿರುವ ಸಂವಿಧಾನದಿಂದ ಮಾತ್ರ. ಪಥಸಂಚಲನ ಸಾಗುವ ದ್ವೇಷದ ಬೀದಿಯಲ್ಲಿ ಪ್ರೀತಿ ಹುಟ್ಟವುದಾದರೂ ಹೇಗೆ?, ದೊಣ್ಣೆ, ಲಾಠಿ, ಬೂಟಿನ ಪಥಸಂಚಲನದಿಂದ ಸಮಾಜದಲ್ಲಿ ಭಯ, ದ್ವೇಷದ ವಾತಾವರಣ ಸೃಷ್ಟಿಸಲಾಗುತ್ತಿದೆ. ಪಥಸಂಚಲನದ ಉದ್ದೇಶವೇ ಭಯದ ವಾತಾವರಣದ ನಿರ್ಮಾಣ ಎನ್ನುವುದು ಸ್ಪಷ್ಟ’.

‘ಆರ್‌ಎಸ್‌ಎಸ್‌ ‘ಪೇಯ್ಡ್’ ಸಂಘಟನೆಯಲ್ಲ ಎಂದಾದರೇ ದೇಶ-ವಿದೇಶಿ ಮೂಲದಿಂದಲೂ ಹರಿದು ಬರುತ್ತಿರುವ ಹಣಕ್ಕೆ ಹೊಣೆ ಯಾರು?, ಸಮಾಜ ಸೇವೆ ಮಾಡಲು ಆರ್‌ಎಸ್‌ಎಸ್‌ ಸರ್ಕಾರಿ ಸಂಸ್ಥೆಯೂ ಅಲ್ಲ, ಸರ್ಕಾರೇತರ ಸಂಸ್ಥೆಯೂ ಅಲ್ಲ, ಕನಿಷ್ಟ ನೊಂದಾವಣಿಯೂ ಆಗಿಲ್ಲ. ಹಾಗಾದರೆ ಇದೊಂದು ಭೂಗತ ಸಂಘಟನೆ ಅಲ್ಲವೇ?, ವಿದೇಶದಿಂದ ಆರ್‌ಎಸ್‌ಎಸ್‌ಗೆ ಮಾತ್ರ ಹಣ ಬರಲಿ ಎಂಬ ಕಾರಣಕ್ಕಾಗಿಯೇ ಅಲ್ಲವೇ ಎನ್‌ಜಿಓಗಳಿಗೆ ವಿದೇಶಿ ಫಂಡ್ ಬರುವುದನ್ನು ನಿಲ್ಲಿಸಿರುವುದು’ ಎಂದು ಅವರು ಪ್ರಶ್ನಿಸಿದ್ದಾರೆ.

‘ನೂರು ವರ್ಷದ ಇತಿಹಾಸದಲ್ಲಿ ದೊಣ್ಣೆ ಹಿಡಿದು ಸಾಗಿರುವ ಪಥಸಂಚಲನದಿಂದ ಸಮಾಜಕ್ಕೆ ಆಗಿರುವ ಲಾಭವೇನು?, ಹಾದಿ ಬೀದಿಯಲ್ಲಿ ದೊಣ್ಣೆ ಹಿಡಿದು ಶಾಂತಿ-ಸುವ್ಯವಸ್ಥೆಯನ್ನು ಹಾಳು ಮಾಡಿದ್ದೇ ಸಾಧನೆಯೇ?, ದೊಣ್ಣೆ ಜನರ ಕೈಗೆ ಸಿಕ್ಕಿ ಬಡಿಸಿಕೊಳ್ಳಬೇಡಿ, ಬೇಗ ಎಚ್ಚೆತ್ತುಕೊಳ್ಳದಿದ್ದರೇ ಸಂಘಕ್ಕೆ ಉಳಿಗಾಲವಿಲ್ಲ’ ಎಂದು ಹರಿ‍ಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ.

    ಕೈಯಲ್ಲಿ ದೊಣ್ಣೆ ಹಿಡಿದು ಜನರಲ್ಲಿ ಭಯ ಹುಟ್ಟಿಸಬಹುದೇ ಹೊರತು ಭರವಸೆ ಮೂಡಿಸಲು ಸಾಧ್ಯವಿಲ್ಲ @blsanthosh ಅವರೇ, ದೇಶದ ಜನರಲ್ಲಿ ಆತ್ಮವಿಸ್ವಾಸ, ಧೈರ್ಯ, ಭರವಸೆ ಮೂಡಿಸಿರುವುದು ಬಾಬಾ ಸಾಹೇಬರು ನೀಡಿರುವ ಸಂವಿಧಾನದಿಂದ ಮಾತ್ರ ಎಂದು ಬರೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು ನೈರುತ್ಯ ರೈಲ್ವೆ ವ್ಯಾಪ್ತಿಗೆ: ಕೇರಳ ಅಡ್ಡಗಾಲು ಬೆನ್ನನ್ನೇ ಡಿಕೆ ಶಿವಕುಮಾರ್‌ಗೆ ಬ್ರಿಜೇಶ್ ಚೌಟ ಪತ್ರ

ಮೊಬೈಲ್ ಕೊಡಲಿಲ್ಲವೆಂದು ಸಹೋದರಿಯನ್ನು ಕೊಂದಿದ್ದ ತಮ್ಮನಿಗೆ 4ವರ್ಷದ ಬಳಿಕ ತೀರ್ಪು ಪ್ರಕಟ

ರಾಜಧಾನಿಯ ಅರ್ಹ ಮಹಿಳೆಯರಿಗೆ ತಿಂಗಳಿಗೆ ₹2,500

ಯಾರಿಂದಲೂ ಇನ್ನೊಬ್ಬರ ನಾಯಕತ್ವವನ್ನು ತಪ್ಪಿಸೋಕೆ ಸಾಧ್ಯವಿಲ್ಲ: ಸತೀಶ್ ಜಾರಕಿಹೊಳಿ

Toxic Cinema: ರುಕ್ಮಿಣಿ ನಿಮ್ಮಿಂದ ಇದನ್ನು ನಾನು ನಿಜವಾಗಿಯೂ ನಿರೀಕ್ಷಿಸಿರಲಿಲ್ಲ

ಮುಂದಿನ ಸುದ್ದಿ
Show comments