Select Your Language

Notifications

webdunia
webdunia
webdunia
webdunia

ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಆಕ್ರೋಶ

ಬೆಂಗಳೂರು
ಬೆಂಗಳೂರು : ದೇಶದಲ್ಲಿ ಕೊರೊನಾ ಸೋಂಕು ಹರಡುತ್ತಿರುವ ಹಿನ್ನಲೆ ದೇಶದ ಆರ್ಥಿಕ ವ್ಯವಸ್ಥೆ ಮತ್ತಷ್ಟು ಹದಗೆಟ್ಟಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಈ ಬಗ್ಗೆ ಟ್ವಿಟ್ ಮಾಡಿರುವ ಡಿಕೆಶಿ, ಎಮ್ಮೆಗೆ ಜ್ವರ ಬಂದರೆ ಎತ್ತಿಗೆ ಬರೆ ಹಾಕಿದಂತಾಗಿದೆ ಕೇಂದ್ರ ಆರೋಗ್ಯ  ಮತ್ತು ಕುಟುಂಬ ಕಲ್ಯಾಣ ಇಲಾಖೆ ಎಲ್ಲ ದೂರವಾಣಿ ಕರೆಗಳ ಆರಂಭದಲ್ಲಿ ನೀಡುತ್ತಿರುವ ಕೊರೊನಾ ಕುರಿತ ಮುನ್ನೆಚ್ಚರಿಕೆ ಸಂದೇಶ.


ದೇಶದ ಜನ ಇದರಿಂದ ತಲ್ಲಣಿಸಿ ಹೋಗಿದ್ದಾರೆ. ಹಣ್ಣು, ತರಕಾರಿಯಿಂದ ಹಿಡಿದು ಷೇರುಗಳವರೆಗೆ ಸರ್ವ ಮಾರುಕಟ್ಟೆಯೂ ಪಾತಾಳಕ್ಕೆ ಕುಸಿದಿದೆ. ಸಾಮೂಹಿಕವಾಗಿ ಜನರನ್ನ ಹೆದರಿಸುವುದು ಸಲ್ಲದು ಎಂದು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮಧ್ಯಪ್ರದೇಶದ ರೆಬೆಲ್ ಶಾಸಕರ ಸಂಪರ್ಕ ಸಾಧಿಸಲು ಡಿಕೆಶಿ ಮೋರೆಹೋದ ದಿಗ್ವಿಜಯ್ ಸಿಂಗ್