ರಾಜ್ಯ ಸರಕಾರದ ವಿರುದ್ಧ ಅನಾವಶ್ಯಕ ಟೀಕೆ ಮಾಡುತ್ತಿರುವ ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿ ಅವರ ವಿರುದ್ಧ ಕ್ರಮ ಕೈಗೊಳ್ಳಲು ಹೈಕಮಾಂಡ್‌ಗೆ ಶಿಫಾರಸು ಮಾಡಲಾಗಿದೆ ಎಂದು ಕೆಪಿಸಿಸಿ ಕಾರ್ಯಧ್ಯಕ್ಷ ದಿನೇಶ್ ಗಂಡೂರಾವ್ ತಿಳಿಸಿದ್ದಾರೆ.
ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಾಯಕ ಜನಾರ್ದನ ಪೂಜಾರಿ ಅವರು ಯಾವುದೇ ಆಧಾರವಿಲ್ಲದೇ ರಾಜ್ಯ ಸರಕಾರದ ವಿರುದ್ಧ ಪದೇ ಪದೇ ಟೀಕೆ ಮಾಡುತ್ತಿದ್ದಾರೆ. ಅವರ ಹೇಳಿಕೆಯನ್ನು ಒಪ್ಪಲು ಸಾಧ್ಯವಿಲ್ಲ ಎಂದು ಹೇಳಿದರು.
ಹಿರಿಯ ನಾಯಕರ ಹೇಳಿಕೆ ರಾಜ್ಯ ಸರಕಾರ ಹಾಗೂ ಪಕ್ಷಕ್ಕೆ ಧಕ್ಕೆ ತರುವ ವಿಚಾರವಾಗಿದೆ. ಅನಾವಶ್ಯಕವಾಗಿ ಸರಕಾರದ ವಿರುದ್ಧ ನೀಡುವ ಹೇಳಿಕೆಗಳನ್ನು ತಕ್ಷಣವೇ ನಿಲ್ಲಿಸಬೇಕು ಎಂದು ಕಾಂಗ್ರೆಸ್ ಹೈಕಮಾಂಡ್‌ಕ್ಕೆ ದೂರು ಸಲ್ಲಿಸಲಾಗಿದೆ ಎಂದರು.
ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಮಾಜಿ ಗೃಹ ಸಚಿವ ಕೆ.ಜೆ.ಜಾರ್ಜ್ ಅವರಿಗೆ ಸಿಐಡಿಯಿಂದ ಬಿಗ್ ರಿಲೀಫ್ ಸಿಕ್ಕಿರುವ ಕುರಿತು ಮಾತನಾಡಿದ ಅವರು, ಕೆ.ಜೆ.ಜಾರ್ಜ್ ರಾಜೀನಾಮೆ ನೀಡುವಂತಹ ತಪ್ಪು ಮಾಡೇ ಇಲ್ಲ. ಆದರಿಂದ ಅವರು ರಾಜೀನಾಮೆ ನೀಡುವ ಪ್ರಶ್ನೆಯೇ ಇರಲಿಲ್ಲ. ಬಿಜೆಪಿಯವರು ಬಿಜಿಪಿಯವರು ವಿನಾಕಾರಣ ಜಾರ್ಜ್ ಅವರ ಮೇಲೆ ಆರೋಪ ಮಾಡಿತ್ತು ಎಂದು ಕೆಪಿಸಿಸಿ ಕಾರ್ಯಧ್ಯಕ್ಷ ದಿನೇಶ್ ಗಂಡೂರಾವ್ ಆರೋಪಿಸಿದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ