Select Your Language

Notifications

webdunia
webdunia
webdunia
webdunia

ಕಾಂಗ್ರೆಸ್ ಮುಖಂಡ ಮದನ್ ಪಟೇಲ್‌ಗೆ ಕೊಲೆ ಬೆದರಿಕೆ

ಕಾಂಗ್ರೆಸ್
ಕಾಂಗ್ರೆಸ್ ಮುಖಂಡ ಮದನ್ ಪಟೇಲ್‌ಗೆ ಸಿ.ವಿ.ರಾಮನ್‌ ನಗರದ ಕಾಂಗ್ರೆಸ್ ಮುಖಂಡ ರಮೇಶ್ ಕೊಲೆ ಬೆದರಿಕೆ ಹಾಕಿರುವ ಘಟನೆ ವರದಿಯಾಗಿದೆ.
 
ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಯಾವುದೇ ಕಾರಣಕ್ಕೂ ಸ್ಪರ್ಧಿಸಬಾರದು. ನಾನೇ ಚುನಾವಣೆಗೆ ಸ್ಪರ್ಧಿಸುತ್ತೇನೆ ಎಂದು ರಮೇಶ್, ಮದನ್ ಪಟೇಲ್‌ಗೆ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.
 
ರಮೇಶ್ ದೂರವಾಣಿ ಕರೆಯ ಬಗ್ಗೆ ಪ್ರತಿಕ್ರಿಯೆ ನೀಡಿದ ಪಟೇಲ್, ರಮೇಶ್ ತಮ್ಮ ಮೊಬೈಲ್‌ನಿಂದಲೇ ಕರೆ ಮಾಡಿ ಜೀವ ಬೆದರಿಕೆಯೊಡ್ಡಿದ್ದಾರೆ. ಅವರ ಕರೆಯನ್ನು ರೆಕಾರ್ಡ್ ಮಾಡಿದ್ದೇನೆ ಎಂದು ಹೇಳಿದ್ದಾರೆ.
 
ಕಾಂಗ್ರೆಸ್ ಮುಖಂಡ ರಮೇಶ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸುತ್ತೇನೆ ಎಂದು ಮದನ್ ಪಟೇಲ್ ಎಚ್ಚರಿಕೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಸತತ 3 ಗಂಟೆಗಳ ಕಾಲ ನಡೆದ ಸಚಿವ ಡಿ.ಕೆ. ಶಿವಕುಮಾರ್ ವಿಚಾರಣೆ ಅಂತ್ಯ