Publish Date: Fri, 23 Feb 2018 (10:15 IST)
Updated Date: Fri, 23 Feb 2018 (10:22 IST)
ಬೆಂಗಳೂರು: ಹೊರಮಾವು ಬಿಬಿಎಂಪಿ ಕಚೇರಿಗೆ ಬಂದು ರದ್ದಾಂತ ಎಬ್ಬಿಸಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಮುಂದಾದ ಕಾಂಗ್ರೆಸ್ ಮುಖಂಡ ನಾರಾಯಣ ಸ್ವಾಮಿ ಕೊನೆಗೂ ಪೊಲೀಸರಿಗೆ ಶರಣಾಗಿದ್ದಾರೆ.
ರಾಮಮೂರ್ತಿ ನಗರ ಪೊಲೀಸ್ ಠಾಣೆಗೆ ಬಂದು ನಾರಾಯಣಸ್ವಾಮಿ ಶರಣಾಗತಿಯಾಗಿದ್ದಾರೆ. ಬಿಬಿಎಂಪಿ ಕಚೇರಿಯಲ್ಲಿ ರದ್ದಾಂತ ಎಬ್ಬಿಸಿದ ವಿಡಿಯೋಗಳು ಭಾರೀ ವೈರಲ್ ಆಗಿತ್ತು. ಇದು ಸದನದಲ್ಲೂ ಪ್ರತಿಧ್ವನಿಸಿತ್ತು.
ಇದಾದ ಬಳಿಕ ಸಿಎಂ ಸಿದ್ದರಾಮಯ್ಯ, ನಾರಾಯಣ ಸ್ವಾಮಿಯನ್ನು ಪಕ್ಷದ ಕೆಆರ್ ಪುರಂ ಬ್ಲಾಕ್ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿದ್ದರು. ಕಾಂಗ್ರೆಸ್ ನಾಯಕನ ಗೂಂಡಾಗಿರಿ ವರ್ತನೆಗೆ ಭಾರೀ ಟೀಕೆ ವ್ಯಕ್ತವಾಗಿತ್ತು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ