Publish Date: Wed, 12 Apr 2023 (10:16 IST)
Updated Date: Wed, 12 Apr 2023 (10:18 IST)
ಶಿವಮೊಗ್ಗ : ಕಾಂಗ್ರೆಸ್ ನಾಯಕರ ಎದೆ ನಡುಗಿಸುವಂತಹ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿದೆ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಶಿವಮೊಗ್ಗದಲ್ಲಿ ಹೇಳಿದ್ದಾರೆ.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ನಾಯಕರು ಅಳೆದು ತೂಗಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದಾರೆ. ಹಾಗಾಗಿ ಚುನಾವಣೆಯಲ್ಲಿ ರಾಜ್ಯದ ಜನರ ಮನಸ್ಸನ್ನು ಗೆದ್ದು ಪೂರ್ಣ ಬಹುಮತದಿಂದ ಬಿಜೆಪಿ ಆಯ್ಕೆಯಾಗಲಿದೆ. ಬಿಡುಗಡೆಯಾದ ಪಟ್ಟಿಯಿಂದ ಬಹಳ ಖುಷಿಯಾಗಿದೆ ಎಂದಿದ್ದಾರೆ.
ಕರ್ನಾಟಕದಲ್ಲಿ ಈವರೆಗೂ ಬಿಜೆಪಿಗೆ ಪೂರ್ಣ ಬಹುಮತ ಬಂದಿಲ್ಲ. ಬಿಜೆಪಿ ಆಡಳಿತ ಮಾಡಲಿ ಎಂದು ಜನ ಆದೇಶ ಕೊಟ್ಟಿದ್ದರು. ಈ ಬಾರಿ ಆದೇಶದೊಂದಿಗೆ ಪೂರ್ಣ ಬಹುಮತವನ್ನು ಕೊಡಿ ಎಂದು ಮನವಿ ಮಾಡುತ್ತೇನೆ ಎಂದಿದ್ದಾರೆ.