Webdunia - Bharat's app for daily news and videos

Install App

ರಮ್ಯಾ ಹೇಳಿಕೆಗೆ ಆಶ್ಚರ್ಯ ಬೇಡ, ಅದು ಕಾಂಗ್ರೆಸ್ ಸಂಸ್ಕೃತಿ: ಬಿಜೆಪಿ

Webdunia
ಮಂಗಳವಾರ, 23 ಆಗಸ್ಟ್ 2016 (17:53 IST)
ನಟಿ ರಮ್ಯಾ ಪಾಕಿಸ್ತಾನದ ಪರವಾಗಿ ಮಾತನ್ನಾಡಿರುವುದು ಆಶ್ಚರ್ಯ ತರಿಸುವಂತದ್ದಲ್ಲ. ವಾಸ್ತವವಾಗಿ ಕಾಂಗ್ರೆಸ್‌ನವರಿಗೆ ಪಾಕಿಸ್ತಾನವನ್ನು ಹೊಗಳುವ ಹವ್ಯಾಸ ಮೊದಲಿನಿಂದಲೂ ಇದೆ ಎಂದು ಬಿಜೆಪಿ ನಾಯಕ ಎಸ್. ಪ್ರಕಾಶ್ ವ್ಯಂಗ್ಯವಾಡಿದ್ದಾರೆ. 
 
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಂಸದೆ, ನಟಿ ರಮ್ಯಾ ಅವರು ಹೇಳಿರುವ ಮಾತನ್ನು ನಿರ್ಲಕ್ಷಿಸಬೇಕಿದೆ. ಅವರು ಯಾವ ಆಯಾಮದಲ್ಲಿ ಈ ಹೇಳಿಕೆಯನ್ನು ನೀಡಿದ್ದಾರೆ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕಿದೆ. ಅನಗತ್ಯವಾಗಿ ಅವರಿಗೆ ನಾವೇ ಪ್ರಚಾರ ನೀಡಿದಂತಾಗುತ್ತಿದೆ ಎಂದು ಹೇಳಿದ್ದಾರೆ. 
 
ಪಾಕಿಸ್ತಾನದ ಪರವಾಗಿ ಹೇಳಿಕೆ ನೀಡಿರುವ ರಮ್ಯಾ ಅವರು, ಪಾಕ್ ಕುರಿತು ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರ ಹೇಳಿಕೆ ಸರಿಯಲ್ಲ. ಪಾಕಿಸ್ತಾನ ನರಕವಲ್ಲ, ಪಾಕಿಸ್ತಾನದ ಜನತೆ ಒಳ್ಳೆಯವರೆಂದು ಹೇಳಿದ್ದರು. ಈ ಹೇಳಿಕೆಗೆ ಸಾಕಷ್ಟು ವಿರೋಧಗಳು ವ್ಯಕ್ತವಾಗುತ್ತಿದ್ದು, ರಮ್ಯಾ ವಿರುದ್ಧ ಹಲವು ಪ್ರತಿಭಟನೆಗಳು ನಡೆಯುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments