ಪ್ರತಿಭಟನೆಗೆ ಕಾಂಗ್ರೆಸ್ ನಾಯಕರೇ ಕಾರಣ- ಆರ್.ಅಶೋಕ್ ಆರೋಪ

ಭಾನುವಾರ, 22 ಡಿಸೆಂಬರ್ 2019 (10:53 IST)
ಬೆಂಗಳೂರು : ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಗೆ ಮಂಗಳೂರಿನಲ್ಲಿ ಪ್ರತಿಭಟನೆ ನಡೆಯಲು ಕಾಂಗ್ರೆಸ್ ನಾಯಕರೇ ಕಾರಣ ಎಂದು ಕಂದಾಯ ಸಚಿವ ಆರ್.ಅಶೋಕ್ ಆರೋಪಿಸಿದ್ದಾರೆ.ಮಂಗಳೂರಿನಲ್ಲಿ ಈಗ ಶಾಂತಿ ನೆಲೆಸಿದೆ, ಶಾಂತಿ ನೆಲೆಸಲು ಕಾಂಗ್ರೆಸ್ ನಾಯಕರು ಬಿಡಲಿ. ಖಾದರ್ ಹೇಳಿಕೆಯಿಂದಲೇ ಮಂಗಳೂರಿನಲ್ಲಿ ಸಮಸ್ಯೆಯಾಗಿದೆ. ಪ್ರತಿಭಟನೆಗೆ ಕಾಂಗ್ರೆಸ್ ನಾಯಕರೇ ಕಾರಣ ಎಂದು ಆರ್.ಅಶೋಕ್ ಹೇಳಿದ್ದಾರೆ.


ಮಂಗಳೂರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ ವಿಚಾರದ ಬಗ್ಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಮಂಗಳೂರಿಗೆ ಹೋಗಿ ಮಾಡುವಂಥದ್ದು ಏನೂ ಇಲ್ಲ ಎಂದು ತಿಳಿಸಿದ್ದಾರೆ.

 

ವೆಬ್ದುನಿಯಾವನ್ನು ಓದಿ

ಮುಂದಿನ ಸುದ್ದಿ ರೈತರ 2 ಲಕ್ಷ ರೂ.ವರೆಗಿನ ಕೃಷಿ ಸಾಲ ಮನ್ನಾ-ಸಿಎಂ ಉದ್ಧವ್ ಠಾಕ್ರೆ ಘೋಷಣೆ