ಕಾಂಗ್ರೆಸ್ ಮುಖಂಡರು ದಾರಿ ತಪ್ಪಿಸಲು ತಿರುಚಿದ ಸಿಡಿಯನ್ನು ಬಿಡುಗಡೆಗೊಳಿಸಿದ್ದಾರೆ ಎಂದು ಬಿ.ಎಸ್. ಯಡಿಯೂರಪ್ಪ ಮತ್ತು ಕೇಂದ್ರ ಸಚಿವ ಅನಂತ್ ಕುಮಾರ್ ಆರೋಪ ಮಾಡಿದ್ದಾರೆ.
 
									
			
			 
 			
 
 			
					
			        							
								
																	
	 
	 ಬಿ.ಎಸ್. ಯಡಿಯೂರಪ್ಪ ಮತ್ತು ಕೇಂದ್ರ ಸಚಿವ ಅನಂತ್ ಕುಮಾರ್ ಇಂದು ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಕಪ್ಪ ನೀಡಿದ ಹೇಳಿಕೆಗೆ ನಾವು ಬದ್ಧರಾಗಿದ್ದೇವೆ. ಡೈರಿಯಲ್ಲಿರೋ ವಿಷಯ ಸುಳ್ಳೆಂದು ಸಾಬೀತಾದರೆ ನಾನು ರಾಜಕೀಯ ಸನ್ಯಾಸ ಪಡೆಯುತ್ತೇನೆ ಎಂದು ಘೋಷಿಸಿದರು.
 
									
										
								
																	
	 
	ಒಂದು ವೇಳೆ, ಸಿಎಂ ಸಿದ್ದರಾಮಯ್ಯ ಹೆಸರು ಡೈರಿಯಲ್ಲಿರುವುದೇ ಆದಲ್ಲಿ ಅವರು ರಾಜಕೀಯ ಸನ್ಯಾಸ ಪಡೆಯಬೇಕು ಎಂದು ಸವಾಲ್ ಹಾಕಿದರು.
 
									
											
							                     
							
							
			        							
								
																	
	 
	ಬಿಜೆಪಿಯ ಕಾರ್ಯಕ್ರಮವೊಂದರಲ್ಲಿ ಯಡಿಯೂರಪ್ಪ ಮತ್ತು ಅನಂತ್ ಕುಮಾರ್ ಮಾಡಿದ ಸಂಭಾಷಣೆಯ ವಿಡಿಯೋ ಬಿಡುಗಡೆಯಾಗಿ ರಾಜ್ಯ ರಾಜಕೀಯದಲ್ಲಿ ಕೋಲಾಹಲ ಸೃಷ್ಟಿಸಿದೆ. 
 
									
			                     
							
							
			        							
								
																	
	
	ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ 
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.