Webdunia - Bharat's app for daily news and videos

Install App

‘ನಾನು ತಪ್ಪು ಮಾಡಿಲ್ಲ, ನಾನು ರಾಜೀನಾಮೆ ಕೊಡಲ್ಲ’

Webdunia
ಮಂಗಳವಾರ, 12 ಏಪ್ರಿಲ್ 2022 (19:37 IST)
ನಾನು ಯಾವುದೇ ತಪ್ಪು ಮಾಡಿಲ್ಲ, ನಾನ್ಯಾಕೆ ರಾಜೀನಾಮೆ ನೀಡಲಿ, ಪ್ರಕರಣ ಕೋರ್ಟ್​ನಲ್ಲಿ ವಿಚಾರಣೆ ಹಂತದಲ್ಲಿದೆ, ಕೋರ್ಟ್ ತೀರ್ಪು ಹೊರಬರಲಿ, ಎಂದು ಪ್ರತಿಪಕ್ಷ ಕಾಂಗ್ರೆಸ್ ನಾಯಕರ ಆರೋಪಕ್ಕೆ ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. 40% ಆರೋಪದ ವಿರುದ್ಧ ನಾಣು ಸಂತೋಷ್​​ ವಿರುದ್ಧ ಕೋರ್ಟ್​ನಲ್ಲಿ ಕೇಸ್​ ದಾಖಲಿಸಿದ್ದೆ. ಕೋರ್ಟ್‍ನಿಂದ ನೋಟಿಸ್ ಹೋದ ನಂತರ ಭೀತಿಗೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದು. ಸಂತೋಷ್ ಆತ್ಮಹತ್ಯೆಗೂ, ನನಗೂ ಏನೂ ಸಂಬಂಧವಿಲ್ಲ. ಸಂತೋಷ್ ಅವರನ್ನು ನಾನು ನೋಡಿಲ್ಲ. ಅವರು ಯಾರೂ ಎಂದೇ ನನಗೆ ಗೊತ್ತಿಲ್ಲ ಎಂದು ಹೇಳಿದರು. ಉಡುಪಿಯ ಶಾಂಭವಿ ಲಾಡ್ಜ್​​​ನಲ್ಲಿ ಬಿಜೆಪಿ ಕಾರ್ಯಕರ್ತ, ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಿರುವ ವಿಷಯ ಬಹಿರಂಗವಾಗುತ್ತಿದ್ದಂತೆ ಅವರು ವಾಟ್ಸ್​​​ಆ್ಯಪ್​​​​ನಲ್ಲಿ ಕಳುಹಿಸಿದ್ದ ಸಂದೇಶ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಅದರಲ್ಲಿ ನನ್ನ ಆತ್ಮಹತ್ಯೆಗೆ ಸಚಿವ ಈಶ್ವರಪ್ಪನವರೇ ಕಾರಣ ಎಂದು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರು ಸಚಿವ ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Liverpool Univesity: ಯುಕೆಯ ವಿದ್ಯಾಭ್ಯಾಸ ಬೆಂಗಳೂರಿನಲ್ಲಿ ಮಾಡಬೇಕುನ್ನುವವರಿಗೆ Good News

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಪ್ರೊಪೆಸರ್‌ಗೆ ಬಿಗ್‌ ರಿಲೀಫ್‌

Operation Sindoor ಬಳಿಕ ಮತ್ತೇ ಅಣಕು ಪ್ರದರ್ಶನದಲ್ಲಿ ತೊಡಗಿದ ಭಾರತ, ಇದರ ಅರ್ಥವೇನು

Bantwal Abdul Rahim Case: ಬಿಜೆಪಿ ಶವಗಳ ಮೇಲೆ ರಾಜಕೀಯ ಮಾಡುತ್ತಿದೆ, ದಿನೇಶ್‌ ಗುಂಡೂರಾವ್‌

Abdul Rahim Case: 15 ಮಂದಿಯ ವಿರುದ್ಧ ಬಿತ್ತು ಎಫ್‌ಐಆರ್‌, ಚುರುಕುಗೊಂಡ ತನಿಖೆ

ಮುಂದಿನ ಸುದ್ದಿ
Show comments