Publish Date: Sat, 25 Mar 2017 (18:14 IST)
Updated Date: Sat, 25 Mar 2017 (18:16 IST)
ರಾಜ್ಯದ ಐದಾರು ಸಚಿವರು ಬಿಜೆಪಿ ಸೇರಲು ಸಿದ್ದರಾಗಿದ್ದಾರೆ ಕೇಂದ್ರ ಕಾನೂನು ಖಾತೆ ಸಚಿವ ಡಿ.ವಿ.ಸದಾನಂದಗೌಡ ಹೊಸ ಬಾಂಬ್ ಸಿಡಿಸಿದ್ದಾರೆ.
ಮಾಜಿ ಸಿಎಂ ಎಸ್.ಎಂ.ಕೃಷ್ಣ ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದಂತೆ, ಕೆಲ ಸಚಿವರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಲು ಬಯಸಿದ್ದಾರೆ. ಆದರೆ, ಸಚಿವ ಸ್ಥಾನ ಕೈಯಲ್ಲಿರುವುದರಿಂದ ಸದ್ಯಕ್ಕೆ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗುವುದಿಲ್ಲ ಎಂದು ತಿಳಿಸಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ದಕ್ಷ ಅಡಳಿತದಿಂದಾಗಿ ಕಾಂಗ್ರೆಸ್‌ನಲ್ಲಿರುವ ಒಳ್ಳೆಯ ನಾಯಕರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗುವುದಾಗಿ ತಿಳಿಸಿದ್ದಾರೆ.
ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಜಯಗಳಿಸುವುದು ಖಚಿತ. ಕಾಂಗ್ರೆಸ್ ಪಕ್ಷ ಹೀನಾಯ ಸೋಲನುಭವಿಸಲಿದೆ ಎಂದು ಕೇಂದ್ರ ಕಾನೂನು ಖಾತೆ ಸಚಿವ ಡಿ.ವಿ.ಸದಾನಂದಗೌಡ ಭವಿಷ್ಯ ನುಡಿದಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.