Webdunia - Bharat's app for daily news and videos

Install App

ಕಾಂಗ್ರೆಸ್ ಪಕ್ಷಕ್ಕೆ ಸೋಲಾದಲ್ಲಿ ಕಾಂಗ್ರೆಸ್ಸಿಗರೇ ಕಾರಣ: ಸುರೇಶ್ ಗೌಡ

Webdunia
ಶನಿವಾರ, 4 ಮಾರ್ಚ್ 2017 (14:39 IST)
ಕಾಂಗ್ರೆಸ್ ಪಕ್ಷವನ್ನು ಸೋಲಿಸುವ ಶಕ್ತಿ ವಿಪಕ್ಷಗಳಿಗಿಲ್ಲ. ಒಂದು ವೇಳೆ, ಕಾಂಗ್ರೆಸ್ ಪಕ್ಷಕ್ಕೆ ಸೋಲಾದಲ್ಲಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಮತ್ತು ಸಚಿವರುಗಳೇ ಮೂಲ ಕಾರಣ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಸುರೇಶ್ ಗೌಡ ವಾಗ್ದಾಳಿ ನಡೆಸಿದ್ದಾರೆ. 
 
ಹಣ ಪಡೆದು ಮತಹಾಕಿ ದ್ರೋಹವೆಸಗಿದ ಜೆಡಿಎಸ್ ಪಕ್ಷದ ಬಂಡಾಯ ಶಾಸಕರಿಗೆ ಟಿಕೆಟ್ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿರುವುದು ಆಘಾತಕಾರಿ ಸಂಗತಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ರಾಜ್ಯದ ಜನತೆ ಹಣ ಪಡೆದು ಮತ ಹಾಕಿದ ಬಂಡಾಯ ಶಾಸಕರಿಗೆ ತಕ್ಕ ಪಾಠ ಕಲಿಸಲು ನಿರ್ಧರಿಸಿದ್ದಾರೆ. ದೇವೇಗೌಡರೇ ಬಂದರೂ ಕೂಡಾ ಬಂಡಾಯ ಶಾಸಕರನ್ನು ಗೆಲ್ಲಿಸಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.
 
ನಾಗಮಂಗಲ ಕ್ಷೇತ್ರದ ಶಾಸಕ ಚಲುವರಾಯ ಸ್ವಾಮಿ ಮುಂದಿನ ಚುನಾವಣೆಯಲ್ಲಿ ಜಯಗಳಿಸಿದಲ್ಲಿ ರಾಜಕೀಯ ತ್ಯಜಿಸುತ್ತೇನೆ. ಕಳೆದ 20 ವರ್ಷಗಳಿಂದ ಚಲುವರಾಯಸ್ವಾಮಿ ಕಾಂಗ್ರೆಸ್ ಕಾರ್ಯಕರ್ತರಿಗೆ ಕಿರುಕುಳ ನೀಡಿದ್ದಾರೆ. ಅಂತಹ ವ್ಯಕ್ತಿಗೆ ಕಾಂಗ್ರೆಸ್ ಪಕ್ಷ ನೀಡಲು ನಿರ್ಧರಿಸಿದೆ. ಇವರಿಗೆ ಮಾನ, ಮರ್ಯಾದೆ ಇದೆಯಾ? ಎಂದು ಗುಡುಗಿದ್ದಾರೆ.
 
ಕಳೆದ ಚುನಾವಣೆಯಲ್ಲಿ ಅಲ್ಪಮತಗಳ ಅಂತರದಿಂದ ಸೋಲನುಭವಿಸಿದ ನಾಯಕರಿಗೆ ಟಿಕೆಟ್ ನೀಡುವುದಾಗಿ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಭರವಸೆ ನೀಡಿದ್ದಾರೆ. ಮುಂಬರುವ ಚುನಾವಣೆಯಲ್ಲಿ ರಾಹುಲ್ ಗಾಂಧಿ ಬಳಿ ತೆರಳಿ ಟಿಕೆಟ್‌ ನೀಡುವಂತೆ ಮನವಿ ಮಾಡುವುದಾಗಿ ಹಿರಿಯ ಕಾಂಗ್ರೆಸ್ ಮುಖಂಡ ಸುರೇಶ್ ಗೌಡ ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Operation Sindoor ಟಾರ್ಗೆಟ್ ಏನಾಗಿತ್ತು ಎಂದು ಬಹಿರಂಗಪಡಿಸಿದ ಪ್ರಧಾನಿ ಮೋದಿ

Karnataka: ಭಾರತೀಯ ಸೇನೆಗಾಗಿ ಬಿಜೆಪಿಯಿಂದ ಪಕ್ಷಾತೀತ ತಿರಂಗಾ ಯಾತ್ರೆ

Nuclear leak: ಪಾಕಿಸ್ತಾನದಲ್ಲಿ ಈಗ ಎಲ್ಲರಿಗೂ ವಾಂತಿ, ತಲೆನೋವು: ಎಲ್ಲಾ ಭಾರತೀಯ ಸೇನೆ ಇಫೆಕ್ಟ್

Operation Kellar: ಪಹಲ್ಗಾಮ್ ನಲ್ಲಿ ದಾಳಿ ನಡೆಸಿದ್ದ ಮೂವರು ಉಗ್ರರು ಫಿನಿಶ್

PM Modi: ಆದಂ ಪುರ ವಾಯುನೆಲೆಗೆ ಮೋದಿ ಸರ್ಪ್ರೈಸ್ ಭೇಟಿ, ಸೆಲ್ಫೀಗೆ ಪೋಸ್

ಮುಂದಿನ ಸುದ್ದಿ
Show comments