Publish Date: Fri, 15 Sep 2017 (12:45 IST)
Updated Date: Fri, 15 Sep 2017 (12:48 IST)
ಕಾಂಗ್ರೆಸ್ ನಾಯಕರ ಭ್ರಷ್ಟಾಚಾರದ ಪಟ್ಟಿ ಸಿದ್ದವಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಸಿಎಂ ಸಿದ್ದರಾಮಯ್ಯ ಸೇರಿದಂತೆ ಅವರ ಪುತ್ರ ಯತೀಂದ್ರ, ಸಚಿವರು, ಶಾಸಕರ ಭ್ರಷ್ಟಾಚಾರಗಳ ಪಟ್ಟಿ ಸಿದ್ದವಾಗುತ್ತಿದ್ದು, ಮುಂದಿನ ವಾರ ಹಗರಣಗಳ ದಾಖಲೆಗಳನ್ನು ಬಿಡುಗಡೆ ಮಾಡುತ್ತೇನೆ ಎಂದು ತಿಳಿಸಿದ್ದಾರೆ.
ಸರಕಾರ ನಮಗೆ ಯಾವುದೇ ದಾಖಲೆಗಳು ಸಿಗದಂತೆ ಪ್ರಯತ್ನಿಸುತ್ತಿದೆ. ಆದರೆ, ನಾವು ದಾಖಲೆಗಳನ್ನು ಸಂಗ್ರಹಿಸದೆ ಬಿಡುವುದಿಲ್ಲ ಎಂದು ಗುಡುಗಿದ್ದಾರೆ. ಕಾಂಗ್ರೆಸ್ ನಾಯಕರ ಹಗರಣಗಳನ್ನು ಬಹಿರಂಗಗೊಳಿಸಿ ರಾಜ್ಯಪಾಲ ವಜುಭಾಯಿ ವಾಲಾ ಅವರಿಗೆ ದಾಖಲೆಗಳನ್ನು ನೀಡುತ್ತೇವೆ ಎಂದರು.
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಬಹುಮತಗಳಿಸಿ ಅಧಿಕಾರಕ್ಕೆ ಬರುವುದು ಖಚಿತ. ಇದನ್ನು ತಡೆಯಲು ಯಾರೂ ಸಾಧ್ಯವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.