ಮುಂದಿನ ಚುನಾವಣೆಗಾಗಿ ಈಗಲೇ ರಣತಂತ್ರ ಹೆಣೆಯುತ್ತಿರುವ ಕಾಂಗ್ರೆಸ್ ನಾಯಕರು

Webdunia
ಸೋಮವಾರ, 2 ಆಗಸ್ಟ್ 2021 (09:39 IST)
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ತುಮಕೂರಿನಲ್ಲಿ ಕಾಂಗ್ರೆಸ್ ಪಕ್ಷದಿಂದ ಜಮೀರ್ ಅಹ್ಮದ್ ಖಾನ್ ಅವರನ್ನು ಕಣಕ್ಕಿಳಿಸಿದರೆ ಗೆಲುವು ಖಚಿತ ಎನ್ನುವುದು ಕಾಂಗ್ರೆಸ್ ಮುಖಂಡರ ಲೆಕ್ಕಾಚಾರವಾಗಿದೆ.

ಮುಸ್ಲಿಮರನ್ನು ಒಂದುಗೂಡಿಸಬಹುದು. ಒಂದು ವೇಳೆ ಅವರು ತಮ್ಮ ಭದ್ರಕೋಟೆಯಾದ ಚಾಮರಾಜಪೇಟೆಯನ್ನು ಸಿದ್ದರಾಮಯ್ಯನವರಿಗೆ ಬಿಟ್ಟುಕೊಟ್ಟರೆ ತುಮಕೂರಿನಿಂದ ಜಮೀರ್‌ಗೆ ಟಿಕೆಟ್ ನೀಡಲು ಕಾಂಗ್ರೆಸ್ ಪಕ್ಷ ಲೆಕ್ಕಾಚಾರ ಹಾಕಿದೆ ಎನ್ನಲಾಗುತ್ತಿದೆ.
 
ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗಾಗಿ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರವನ್ನು ಬಿಟ್ಟುಕೊಟ್ಟು, 2023ರ ವಿಧಾನಸಭೆ ಚುನಾವಣೆಯಲ್ಲಿ ಜಮೀರ್ ತುಮಕೂರಿನಿಂದ ಸ್ಪರ್ಧಿಸಲಿದ್ದಾರೆ ಎಂದು ಅವರ ಬೆಂಬಲಿಗರು ಹೇಳುತ್ತಿದ್ದಾರೆ.
 
ಕೆಲ ದಿನಗಳ ಹಿಂದೆ ಯುವ ಕಾಂಗ್ರೆಸ್ ಕಾರ್ಯಕರ್ತರು, ಜಮೀರ್ ಹುಟ್ಟುಹಬ್ಬವನ್ನು ಆಚರಿಸಿದರು, ಇದೇ ವೇಳೆ ನಗರದಲ್ಲಿ ಅಗತ್ಯವಿರುವ ಜನರಿಗೆ ಆಹಾರ ಕಿಟ್‌ಗಳನ್ನು ವಿತರಿಸಿದರು. ಎಲ್ಲರ ಬೆಂಬಲದೊಂದಿಗೆ ಯುವ ಕಾಂಗ್ರೆಸ್ ಅನ್ನು ಸಂಘಟಿಸಲು ಮುಂದಾಗಿದ್ದಾರೆ. 
 
2021ರ ಮೇ ತಿಂಗಳಿನಲ್ಲಿ ಕೋವಿಡ್ ಸಾಂಕ್ರಾಮಿಕದ ವೇಳೆ  ಜಮೀರ್ ಅಹ್ಮದ್ ಖಾನ್ ಸ್ವತಃ ತುಮಕೂರಿಗೆ ತೆರಳಿ ಮತದಾರರನ್ನು ಓಲೈಸುವ ಕಾರ್ಯದಲ್ಲಿ ತೊಡಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಾಲಾ ಭದ್ರತಾ ಸಿಬ್ಬಂದಿ ಮೇಲೆ ಬೀದಿ ನಾಯಿ ಅಟ್ಯಾಕ್: ತಕ್ಷಣವೇ ಅವರು ಮಾಡಿದ್ದೇನು, ಭಯಾನಕ ವಿಡಿಯೋ

ಪಿಂಪ್ರಿ ಚಿಂಚ್ವಡ್ನಲ್ಲಿ ಆಘಾತಕಾರಿ ಘಟನೆ: ಬಟ್ಟೆ ಅಂಗಡಿಯಲ್ಲಿ ಪ್ರೇಯಸಿಗೆ ಯದ್ವಾ ತದ್ವಾ ಹೊಡೆದ ಪ್ರಿಯಕರ Video

ಎಲ್ಲಾ ಇಲ್ಲಿಗೇ ನಿಂತಿಲ್ಲ... ರಾಜೀನಾಮೆ ಬೆನ್ನಲ್ಲೇ ಸಿದ್ದರಾಮಯ್ಯ ಹೇಳಿಕೆ ಗಮನಿಸಲೇಬೇಕು

ತಮ್ಮ ವಿದಾಯ ಭಾಷಣದಲ್ಲಿ ಮಹತ್ವದ ವಿಚಾರ ಹಂಚಿಕೊಂಡ ಸಿದ್ದರಾಮಯ್ಯ

ಬೆಂಗಳೂರು ಸ್ಟಾರ್ಟ್‌ಅಪ್ ನಿಯೋ ಸ್ಯಾನ್ ನಿಂದ ಸೇಫ್‌ಡಿಸ್ಪೋಸ್ ಬೆಂಗಳೂರು ಯೋಜನೆಗೆ ಚಾಲನೆ

ಮುಂದಿನ ಸುದ್ದಿ
Show comments