Publish Date: Sun, 15 Apr 2018 (08:50 IST)
Updated Date: Sun, 15 Apr 2018 (08:51 IST)
ಬೆಂಗಳೂರು: ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಟಿಕೆಟ್ ಪಟ್ಟಿ ಘೋಷಣೆ ಮಾಡುವ ಮೊದಲೇ ಆಂತರಿಕ ಅಸಮಾಧಾನ ಭುಗಿಲೆದ್ದಿದೆ.
ಸವದತ್ತಿ ಎಲ್ಲಮ್ಮ ಕ್ಷೇತ್ರದಲ್ಲಿ ಟಿಕೆಟ್ ಆಕಾಂಕ್ಷಿ ಆನಂದ್ ಚೋಪ್ರಾ ಅಸಮಾಧಾನಗೊಂಡಿದ್ದು, ಬೆಂಬಲಿಗರ ಒತ್ತಾಯದ ಮೇರೆಗೆ ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಲು ನಿರ್ಧರಿಸಿದ್ದಾರೆ.
ಇನ್ನು, ಚಿಕ್ಕಮಗಳೂರಿನಲ್ಲಿ ಮಾಜಿ ಶಾಸಕ ಎನ್ . ಸಂಪಂಗಿ ತಮಗೆ ಟಿಕೆಟ್ ತಪ್ಪಿಸಿದ ಸಂಸದ ವೀರಪ್ಪ ಮೊಯಿಲಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಎನ್. ಸುಬ್ಬಾರೆಡ್ಡಿ ಪರ ಲಾಬಿ ನಡೆಸಿದ್ದಕ್ಕೆ ಸಂಪಂಗಿ ಸಿಟ್ಟಾಗಿದ್ದಾರೆ. ಕಾಂಗ್ರೆಸ್ ಟಿಕೆಟ್ ಘೋಷಣೆಯಾಗುವ ಮೊದಲೇ ಅಸಮಾಧಾನವೂ ಶುರುವಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.