Publish Date: Sun, 23 Aug 2020 (18:48 IST)
Updated Date: Sun, 23 Aug 2020 (18:50 IST)
ಕಾಂಗ್ರೆಸ್ ಗೆ ಪೂರ್ಣಾವಧಿ ಅಧ್ಯಕ್ಷರ ನೇಮಕ ಕುರಿತು ಚರ್ಚೆಗಳು ಆರಂಭಗೊಂಡಿವೆ.
ಈ ನಡುವೆ ಬಿಜೆಪಿ ವಿರುದ್ಧ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಗರಂ ಆಗಿದ್ದಾರೆ.
ಕಾಂಗ್ರೆಸ್ ನಾಯಕತ್ವದ ವಿಷಯ ಪಕ್ಷದ ಆಂತರಿಕ ವಿಷಯವಾಗಿದೆ. ಇದನ್ನು ಬಿಜೆಪಿ ಪ್ರಶ್ನೆ ಮಾಡುತ್ತಿರುವುದಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಅಸಮಧಾನ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಪಕ್ಷದಲ್ಲಿ ಗಾಂಧಿ ಕುಟುಂಬದ ನಾಯಕತ್ವವನ್ನು ಕೆಲವರು ಪ್ರಶ್ನಿಸುತ್ತಿರುವುದು ದುರದೃಷ್ಟಕರ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ದೇಶದ ಪ್ರಜಾಸತ್ತೆಯನ್ನೇ ನಾಶ ಮಾಡಲು ಹೊರಟಿರುವ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷವನ್ನು ಇನ್ನಷ್ಟು ಬಲಪಡಿಸಲು ನಾವೆಲ್ಲರೂ ಪ್ರಯತ್ನಿಸಬೇಕು, ದುರ್ಬಲಗೊಳಿಸುವುದಲ್ಲ ಎಂದು ಸಿದ್ದರಾಮಯ್ಯನವರು ಟ್ವಿಟ್ ಮಾಡಿದ್ದಾರೆ.