Select Your Language

Notifications

webdunia
webdunia
webdunia
webdunia

ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಸಚಿವರ ಮೀಟಿಂಗ್

ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಸಚಿವರ ಮೀಟಿಂಗ್
ಬೆಂಗಳೂರು , ಬುಧವಾರ, 11 ಜುಲೈ 2018 (10:10 IST)
ಬೆಂಗಳೂರು: ಶಾಸಕಾಂಗ ಪಕ್ಷದ ನಾಯಕರಾದ ಮೇಲೆ ಇದೇ ಮೊದಲ ಬಾರಿಗೆ ಸಿದ್ದರಾಮಯ್ಯ ಇಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಸುತ್ತಿದ್ದಾರೆ.

ವಿಧಾನಸೌಧದಲ್ಲಿ ಈಗಾಗಲೇ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ಆರಂಭವಾಗಿದೆ. ಕಾಂಗ್ರೆಸ್ ಶಾಸಕರು, ಸಚಿವರು ಇದೇ ಮೊದಲ ಬಾರಿಗೆ ಬಜೆಟ್ ನಂತರ ಸಭೆ ಸೇರುತ್ತಿದ್ದಾರೆ.

ಈ ಸಭೆಯಲ್ಲಿ ಮೊನ್ನೆಯಷ್ಟೇ ಸಿಎಂ ಕುಮಾರಸ್ವಾಮಿ ಮಂಡಿಸಿದ ಬಜೆಟ್ ಬಗ್ಗೆ ಚರ್ಚೆ ಮಾಡುವ ಸಾಧ್ಯತೆಯಿದೆ. ಕರಾವಳಿ, ಮಧ್ಯ ಕರ್ನಾಟಕ, ಉತ್ತರ ಕರ್ನಾಟಕಕ್ಕೆ ಎಷ್ಟೆಷ್ಟು ಅನುದಾನ ಸಿಕ್ಕಿದೆ, ಯಾವ ಶಾಸಕರ ಕ್ಷೇತ್ರಕ್ಕೆ ಎಷ್ಟು ಕೊಡುಗೆ ಸಿಕ್ಕಿದೆ ಎನ್ನುವುದರ ಬಗ್ಗೆ ಚರ್ಚೆಯಾಗುವ ಸಾಧ್ಯತೆಯಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

Share this Story:

Follow Webdunia kannada

ಮುಂದಿನ ಸುದ್ದಿ

ದಿನೇಶ್ ಗುಂಡೂರಾವ್ ಗೆ ಇಂದು ಕೆಪಿಸಿಸಿ ಪಟ್ಟಾಭಿಷೇಕ