Publish Date: Sun, 17 Mar 2019 (06:38 IST)
Updated Date: Sun, 17 Mar 2019 (06:43 IST)
ಬೆಂಗಳೂರು : ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಕಣಕ್ಕೀಳಿಯಲು ಮುಂದಾದ ದೇವೇಗೌಡರಿಗೆ ಕಾಂಗ್ರೆಸ್ಸಿನ ಶಾಸಕರು ಕೆಲವು ಷರತ್ತುಗಳನ್ನು ವಿಧಿಸಿದ್ದಾರೆ.
ಹಾಸನ ಕ್ಷೇತ್ರವನ್ನು ಮೊಮ್ಮಗ ಪ್ರಜ್ವಲ್ ರೇವಣ್ಣಗೆ ಬಿಟ್ಟುಕೊಟ್ಟ ದೇವೇಗೌಡರು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಬೇಕೆ ಎಂದು ಚಿಂತನೆ ನಡೆಸುತ್ತಿರುವಾಗಲೇ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಶಾಸಕರಾದ ಎಸ್.ಟಿ. ಸೋಮಶೇಖರ್, ಬೈರತಿ ಸುರೇಶ್, ಬೈರತಿ ಬಸವರಾಜು, ಅಖಂಡ ಶ್ರೀನಿವಾಸಮೂರ್ತಿ ಈ ಷರತ್ತುಗಳನ್ನು ಈಡೇರಿಸಿದ್ದರಷ್ಟೇ ದೇವೇಗೌಡರ ಪರ ಕೆಲಸ ಮಾಡೋದಾಗಿ ಹೇಳಿದ್ದಾರೆ ಎನ್ನಲಾಗುತ್ತಿದೆ.
*ಸ್ಥಳೀಯ ಸಮಸ್ಯೆಗಳನ್ನು ಬಗೆಹರಿಸಬೇಕು *ಅನುದಾನ ತಾರತಮ್ಯ ಬಗೆಹರಿಸಬೇಕು
* ಅನುದಾನವನ್ನು ಬಿಡುಗಡೆ ಮಾಡಬೇಕು
*ಬೇಡಿಕೆಗಳನ್ನು ಈಡೇರಿಸಿದ್ರೆ ಗೌಡರ ಪರ ಕೆಲಸ
ಕಾಂಗ್ರೆಸ್ಸಿನ ಶಾಸಕರೊಂದಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಖುದ್ದು ಮಾತುಕತೆ ನಡೆಸಿದ್ದು, ಶಾಸಕರ ಡಿಮ್ಯಾಂಡ್ ಬಗ್ಗೆ ಸಿಎಂ ಹಾಗೂ ದೇವೇಗೌಡರ ಜೊತೆ ಚರ್ಚಿಸುವುದಾಗಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರಂತೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.