Webdunia - Bharat's app for daily news and videos

Install App

ಸರ್ಕಾರ ವಿರುದ್ಧ ಕಾಂಗ್ರೆಸ್‌ ಮೌನಾಸ್ತ್ರ

Webdunia
ಬುಧವಾರ, 16 ಫೆಬ್ರವರಿ 2022 (21:08 IST)
ಬೆಂಗಳೂರು: ಹಿಜಾಬ್‌ ವಿವಾದದಿಂದ ವಿದ್ಯಾರ್ಥಿಗಳನ್ನು ಶಿಕ್ಷಣದಿಂದ ವಂಚಿತರನ್ನಾಗಿ ಮಾಡಲಾಗುತ್ತಿದೆ. ಇದು ಆಗಬಾರದು ಎಂದು ಕಾಂಗ್ರೆಸ್‌ ವಿಧಾನ ಸಭಾ ಕಲಾಪದಲ್ಲಿ ಕಪ್ಪು ಪಟ್ಟಿ ಪ್ರದರ್ಶಿಸಿ ಮೌನ ಪ್ರತಿಭಟನೆ ಮಾಡಿ ಗಮನ ಸೆಳೆಯಿತು.
ರಾಜ್ಯಪಾಲ ಥಾವರ್ ಚಂದ್ ಗೆಲ್ಹೋಟ್ ಅವರು ವಿಧಾನಮಂಡಲದ ಉಭಯ ಸದನಗಳ ಸದಸ್ಯರನ್ನುದ್ದೇಶಿಸಿ ಭಾಷಣ ಆರಂಭಿಸುವ ಮುನ್ನವೇ ಕಾಂಗ್ರೆಸ್ ಸದಸ್ಯರು ತಮ್ಮ ತೋಳಿಗೆ ಕಪ್ಪುಪಟ್ಟಿ ಧರಿಸಿ ವಿಧಾನಸಭೆಗೆ ಹಾಜರಾಗಿದ್ದರು. ರಾಷ್ಟ್ರ ಮಟ್ಟದಲ್ಲಿ ಸುದ್ದಿಯಾಗುತ್ತಿರುವ ಹಿಜಾಬ್‌ ಮಕ್ಕಳ ಶಿಕ್ಷಣದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಇದು ಆಗಬಾರದು. ಕೋವಿಡ್‌ನಿಂದ ಈಗಾಗಲೇ ವಿದ್ಯಾರ್ಥಿಗಳು ಶಿಕ್ಷಣದಿಂದ ದೂರ ಉಳಿಯುವ ಪರಿಸ್ಥಿತಿ ಬಂದಿದೆ. ಹಿಜಾಬ್‌ ವಿವಾದ ಮತ್ತಷ್ಟು ಸಮಸ್ಯೆ ತರಬಾರದು ಎಂದು ಕಾಂಗ್ರೆಸ್‌ ವಾದಿಸಿತ್ತು. ಅಲ್ಲದೇ ಇದೊಂದು ಧರ್ಮ ಸೂಕ್ಷ್ಮ ವಿಚಾರವಾದ್ದರಿಂದ ಯಾವ ಕಡೆಗೂ ಸ್ಪಷ್ಟ ನಿಲುವನ್ನು ತೆಗೆದುಕೊಂಡು ವಾದಿಸಲು ಕಾಂಗ್ರೆಸ್‌ ಮುಂದಾಗಿರಲಿಲ್ಲ. ಇದೀಗ ಕಲಾಪದಲ್ಲಿ ತೋಳಿಗೆ ಕಪ್ಪು ಕಟ್ಟಿ ಕಟ್ಟಿಕೊಂಡು ಮೌನವಾಗಿ ಪ್ರತಿಭಟನೆ ಮಾಡಿದೆ. ಈ ಮೂಲಕ ಕಾಂಗ್ರೆಸ್‌ ಮೌನಾಸ್ತ್ರವನ್ನು ಪ್ರಯೋಗ ಮಾಡಿದ್ದು ಬಿಜೆಪಿಯನ್ನು ಇಕ್ಕಟ್ಟಿಗೆ ಸಿಲುಕಿಸುವ ಪ್ರಯತ್ನ ಇದಾಗಿದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments