Publish Date: Fri, 05 Apr 2024 (13:50 IST)
Updated Date: Fri, 05 Apr 2024 (15:47 IST)
ಹುಬ್ಬಳ್ಳಿ: ರಾಜಕಾರಣಕ್ಕಾಗಿ ಕಾಂಗ್ರೆಸ್ ನಾಯಕರು ಕೀಳು ಮಟ್ಟದ, ಅಸಭ್ಯ ಬಾಷೆಯ ಪ್ರಯೋಗ ಮಾಡುತ್ತಿದ್ದಾರೆಂದು ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಲ್ಹಾದ ಜೋಶಿ ಆರೋಪ ಮಾಡಿದರು.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರು ಜೆಡಿಎಸ್ ಪಕ್ಷದಲ್ಲಿದ್ದಾಗ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ವಿರುದ್ಧ ಏನೆಲ್ಲ ಮಾತನಾಡಿದ್ದಾರೆಂದು ಗೊತ್ತಿದ್ದು, ಇಂದು ರಾಹುಲ್ ಗಾಂಧಿಯನ್ನು ಓಲೈಸಲು ಅವರ ಮುಂದೆ ಸೊಂಟ ಬಗ್ಗಿಸಿ ನಿಲ್ಲುತ್ತಾರೆ ಎಂದು ಕಿಡಿಕಾರಿದರು.
ಇನ್ನೂ ಬಿಜೆಪಿ ಬಗ್ಗೆ ಇಲ್ಲಸಲ್ಲದ ಹೇಳಿಕೆ ನೀಡುತ್ತಿರುವ ಮಲ್ಲಿಕಾರ್ಜುನ ಖರ್ಗೆ ಅವರನ್ನು ನಾಮಕಾವಸ್ತೆಗೆ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ನೇಮಕ ಮಾಡಿದೆ. ಬಿಜೆಪಿಯಲ್ಲಿ ಅಧ್ಯಕ್ಷರ ಹಾಗೂ ಪದಾಧಿಕಾರಿಗಳ ಆಯ್ಕೆ ಕುಟುಂಬ ಆಧರಿಸಿ ನಡೆಯುವುದಿಲ್ಲ ಎಂದರು.
ಧಾರವಾಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿರುವ ಪ್ರಹ್ಹಾದ ಜೋಶಿ ಅವರು ಕೇಂದ್ರ ಕಲ್ಲಿದ್ದಲು, ಗಣಿ ಮತ್ತು ಸಂಸದೀಯ ವ್ಯವಹಾರಗಳ ಸಚಿವರಾಗಿದ್ದಾರೆ. 2004 ರಿಂದ 2019 ರಿಂದ ಧಾರವಾಡ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸಿ, ಲೋಕಸಭೆಯಲ್ಲಿ ಸಂಸತ್ ಸದಸ್ಯರಾಗಿದ್ದಾರೆ. 2014 ರಿಂದ 2016 ರವರೆಗೆ ಕರ್ನಾಟಕದ ಭಾರತೀಯ ಜನತಾ ಪಕ್ಷದ (ಬಿಜೆಪಿ) ರಾಜ್ಯ ಅಧ್ಯಕ್ಷರಾಗಿದ್ದರು.