Select Your Language

Notifications

webdunia
webdunia
webdunia
webdunia

ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆಯಲ್ಲಿ ತುಘಲಕ ದರ್ಬಾರ್

ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆಯಲ್ಲಿ ತುಘಲಕ ದರ್ಬಾರ್
ಮೈಸೂರು , ಸೋಮವಾರ, 4 ಜುಲೈ 2016 (13:06 IST)
ಮುಖ್ಯಮಂತ್ರಿ ಸಿದ್ದರಾಮಯ್ಯ ತವರು ಜಿಲ್ಲೆಯಲ್ಲಿ ಅವರ ಸಮ್ಮುಖದಲ್ಲೇ ಕಾಂಗ್ರೆಸ್ ಬೆಂಬಲಿಗರು ಜಿಲ್ಲಾಧಿಕಾರಿ ಸಿ.ಶಿಖಾ ಅವರಿಗೆ ಬೆದರಿಕೆ ಹಾಕಿದ ಘಟನೆ ವರದಿಯಾಗಿದೆ.
 
ಇಪ್ತಾರ್ ಕೂಟಕ್ಕೆ ತೆರಳಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನ ಸರ್ಕಾರಿ ಅತಿಥಿ ಗೃಹದಲ್ಲಿ ತಂಗಿದ್ದರು. ಈ ಸಮಯದಲ್ಲಿ ಮುಖ್ಯಮಂತ್ರಿಯವರ ಆಪ್ತ ಮರಿಗೌಡ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಮತ್ತು ಅವರ ಬೆಂಬಲಿಗರು ಮೈಸೂರು ಜಿಲ್ಲಾಧಿಕಾರಿ ಸಿ.ಶಿಖಾ ಅವರಿಗೆ ಮುಖ್ಯಮಂತ್ರಿ ಸಮ್ಮುಖದಲ್ಲೇ ಬೆದರಿಕೆ ಹಾಕಿದ್ದಾರೆ.
 
ತಹಶೀಲ್ದಾರ್ ನವೀನ್ ಜೋಸೆಫ್ ಅವರಿಗೆ ಯಾದಗಿರಿ ಜಿಲ್ಲೆಗೆ ವರ್ಗಾವಣೆಯಾಗಿದ್ದರೂ ಅವರಗಿ ರಿಲೀವ್ ಮಾಡಲಿಲ್ಲ ಎಂದು ಜಿಲ್ಲಾಧಿಕಾರಿ ಸಿ.ಶಿಖಾ ವಿರುದ್ಧ ಘೋಷಣೆ ಕೂಗಿದ್ದಾರೆ.
 
ಆರೋಪಕ್ಕೆ ಸ್ಪಷ್ಟನೆ ನೀಡಿರುವ ಸಿ.ಶಿಖಾ, ಜಿಲ್ಲೆಯಲ್ಲಿ 7 ತಹಶೀಲ್ದಾರ ಪೋಸ್ಟ್‌ಗಳಲ್ಲಿ 4 ಪೋಸ್ಟ್‌ಗಳು ಖಾಲಿಯಿದ್ದು, ನವೀನ್ ಜೊಸೆಫ್ ಅವರಿಗೆ ರಿಲೀವ್ ಮಾಡಿದರೆ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುವುದು ಕಷ್ಟವಾಗುತ್ತದೆ. ಅವರ ಹುದ್ದೆಗೆ ಮತ್ತೊಬ್ಬ ಅಧಿಕಾರಿ ಬರುವವರೆಗೂ ಅರನ್ನು ರಿಲೀವ್ ಮಾಡಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸ್ಪಷ್ಟನೆ ನೀಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ನೋಡಲು ಚೆನ್ನಾಗಿಲ್ಲವೆಂದು ಅವಮಾನಿಸಿದ್ದಕ್ಕೆ ಟೆಕ್ಕಿ ಸ್ವಾತಿ ಕೊಲೆ