Select Your Language

Notifications

webdunia
webdunia
webdunia
webdunia

ಬಿಬಿಎಂಪಿ ಚುನಾವಣೆ ಹಿನ್ನೆಲೆ ಕಾಂಗ್ರಸ್ ಸಭೆ: ಬಿಜೆಪಿ ಭ್ರಷ್ಟಾಚಾರಗಳ ಬಗ್ಗೆ ಚರ್ಚೆ

ಬಿಬಿಎಂಪಿ ಚುನಾವಣೆ ಹಿನ್ನೆಲೆ ಕಾಂಗ್ರಸ್ ಸಭೆ: ಬಿಜೆಪಿ ಭ್ರಷ್ಟಾಚಾರಗಳ ಬಗ್ಗೆ ಚರ್ಚೆ
ಬೆಂಗಳೂರು , ಬುಧವಾರ, 5 ಆಗಸ್ಟ್ 2015 (11:44 IST)
ಬಿಬಿಎಂಪಿ ಚುನಾವಣಾ ದಿನಾಂಕ ಘೋಷಣೆಯಾಗಿದ್ದು ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ರಾಜಕೀಯ ಪಕ್ಷಗಳಲ್ಲಿ ಪ್ರಚಾರದ ಚಟುವಟಿಕೆ ಹಾಗೂ ಸಿದ್ಧತೆಗಳು ಗರಿಗೆದರಿದ್ದು, ಕಾಂಗ್ರೆಸ್ ಇಂದು ಮಹತ್ವದ ಸಭೆ ನಡೆಸಿದೆ. 
 
ಹೌದು, ಬಿಬಿಎಂಪಿಯ ಚುಕ್ಕಾಣಿಯನ್ನು ಈ ಬಾರಿಯಾದರೂ ಹಿಡಿಯಬೇಕು ಎಂಬ ತವಕದಲ್ಲಿರುವ ಕಾಂಗ್ರೆಸ್, ಚುನಾವಣಾ ಪ್ರಚಾರಕ್ಕಾಗಿ ಯಾವ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂಬ ಬಗ್ಗೆ ಚರ್ಚಿಸಲು ಇಂದು ಸಭೆ ನಡೆಸಿದೆ. 
 
ಸಭೆಯು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರ ನೇತೃತ್ವದಲ್ಲಿ ನಗರದ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಸಲಾಗಿದೆ. ಸಭೆಯಲ್ಲಿ ಈ ಹಿಂದೆ ಅಧಿಕಾರ ಹಿಡಿದಿದ್ದ ಬಿಜೆಪಿಯ ಸಾಧನೆ, ಹರಗಣಗಳು ಹಾಗೂ ಸಾರ್ವಜನಿಕರ ಅಭಿವೃದ್ಧಿಗೆ ಮಾರಕವಾಗಿ ಕೈಗೊಂಡ ತೀರ್ಮಾನಗಳು ಹಾಗೂ ಈ ಹಿಂದೆ ಅಧಿಕಾರ ನಡೆಸಿದ್ದ ಸಂದರ್ಭದಲ್ಲಿ ಕಾಂಗ್ರೆಸ್ ಮಾಡಿದ ಅಭಿವೃದ್ಧಿ ಕೆಲಸಗಳು ಹೀಗೆ ಎಲ್ಲವನ್ನೂ ಚರ್ಚಿಸಿದ್ದಾರೆ ಎನ್ನಲಾಗಿದೆ. 
 
ಸಭೆಯ ಬಳಿಕ ಪರಮೇಶ್ವರ್ ಪ್ರತಿಕ್ರಿಯಿಸಿದ್ದು, ಈ ಹಿಂದೆ ಬಿಬಿಎಂಪಿಯನ್ನು ಆಳಿದ್ದ ಬಿಜೆಪಿಯು ಹಲವು ವಿಚಾರಗಳಲ್ಲಿ ಭ್ರಷ್ಟಾಚಾರ ನಡೆಸಿತ್ತು. ಆ ಪ್ರಕರಣಗಳಿಗೆ ಸಂಬಂಧಿಸಿದಂತೆ ಪ್ರಸ್ತುತ ಚಾರ್ಜ್‌ಶೀಟ್‌ ಸಿದ್ಧಪಡಿಸುತ್ತಿದ್ದು, ಇನ್ನು ಎರಡು ದಿನಗಳ ಒಳಗೆ ಅದನ್ನು ಬಹಿರಂಗ ಪಡಿಸಲಿದ್ದೇವೆ. ಅಲ್ಲದೆ ಈ ಹಿಂದೆ ಕಾಂಗ್ರೆಸ್ ಮಾಡಿದ್ದ ಹಾಗೂ ಭವಿಷ್ಯದಲ್ಲಿ ಮಾಡಬೇಕಿರುವ ಎಲ್ಲಾ ರೀತಿಯ ಸಮಸ್ಯೆಗಳನ್ನು ಪರಿಗಣಿಸಿ ಅವುಗಳನ್ನೇ ಜನರ ಮುಂದಿಡುತ್ತೇವೆ. ಆ ಮೂಲಕ ಚುನಾವಣೆಯಲ್ಲಿ ಗೆಲುವು ಸಾಧಿಸಲಿದ್ದೇವೆ ಎಂಬ ಭರವಸೆಯನ್ನು ವ್ಯಕ್ತಪಡಿಸಿದರು.  
 
ಇನ್ನು ಈ ಸಭೆಯಲ್ಲಿ ಕೆಪಿಸಿಸಿ ಸದಸ್ಯ ಬಿ.ಎಲ್.ಶಂಕರ್, ಸಚಿವರಾದ ಬೆಂಗಳೂರು ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಹಾಗೂ ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ದಿನೇಶ್ ಗುಂಡೂರಾವ್ ಸೇರಿದಂತೆ ಪಕ್ಷದ ಇತರೆ ಮುಖಂಡರು ಭಾಗವಹಿಸಿದ್ದರು. 

Share this Story:

Follow Webdunia kannada