ಆರ್ ಎಸ್ಎಸ್ ವೇಷದಲ್ಲಿ ಕಾಂಗ್ರೆಸ್ ಶಾಸಕ ಅಶೋಕ್ ರೈ: ಇವರನ್ನೂ ಸಸ್ಪೆಂಡ್ ಮಾಡ್ತೀರಾ ಎಂದ ನೆಟ್ಟಿಗರು

Krishnaveni K
ಮಂಗಳವಾರ, 21 ಅಕ್ಟೋಬರ್ 2025 (10:46 IST)
Photo Credit: X
ಬೆಂಗಳೂರು: ರಾಜ್ಯದಲ್ಲಿ ಆರ್ ಎಸ್ಎಸ್ ಚಟುವಟಿಕೆಗಳಿಗೆ ನಿಷೇಧ ವಿಚಾರ ಈಗ ಭಾರೀ ಸದ್ದು ಮಾಡುತ್ತಿದೆ. ಇದರ ನಡುವೆ ಕಾಂಗ್ರೆಸ್ ಶಾಸಕ ಅಶೋಕ್ ರೈ ಆರ್ ಎಸ್ಎಸ್ ವೇಷದಲ್ಲಿರುವ ಫೋಟೋ  ವೈರಲ್ ಆಗಿದ್ದು, ಇವರನ್ನೂ ಸಸ್ಪೆಂಡ್ ಮಾಡ್ತೀರಾ ಎಂದು ನೆಟ್ಟಿಗರು ಪ್ರಶ್ನಿಸಿದ್ದಾರೆ.

ಆರ್ ಎಸ್ಎಸ್ ಪಥ ಸಂಚಲನದಲ್ಲಿ, ಚಟುವಟಿಕೆಗಳಲ್ಲಿ ಭಾಗಿಯಾಗುವ ಸರ್ಕಾರೀ ನೌಕರರನ್ನು ಸಸ್ಪೆಂಡ್ ಮಾಡುವುದಾಗಿ ಸಚಿವ ಪ್ರಿಯಾಂಕ್ ಖರ್ಗೆ ಎಚ್ಚರಿಕೆ ನೀಡಿದ್ದರು. ಅದರಂತೆ ಓರ್ವ ಪಿಡಿಒನನ್ನು ಈಗಾಗಲೇ ಅಮಾನತು ಮಾಡಲಾಗಿತ್ತು.

ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಶಾಸಕ ಅಶೋಕ್ ರೈ ಗಣವೇಷಧಾರಿಯಾಗಿ ಮಗನ ಜೊತೆ ಪೋಸ್ ಕೊಟ್ಟಿರುವ ಫೋಟೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅಶೋಕ್ ರೈ ಕೂಡಾ ಒಂದು ಕಾಲದಲ್ಲಿ ಆರ್ ಎಸ್ಎಸ್ ನಿಂದಲೇ ಬಂದವರು. ಹೀಗಾಗಿ ಅವರು ಆರ್ ಎಸ್ಎಸ್ ಸಮವಸ್ತ್ರದಲ್ಲಿ ಫೋಟೋಗೆ ಪೋಸ್ ಕೊಟ್ಟಿದ್ದರು.

ಇದೀಗ ಆ ಫೋಟೋ ವೈರಲ್ ಮಾಡಿರುವ ನೆಟ್ಟಿಗರು ನೋಡಿ ನಿಮ್ಮ ಕಾಂಗ್ರೆಸ್ ನಾಯಕರೂ ಆರ್ ಎಸ್ಎಸ್ ಹಿನ್ನಲೆಯಿಂದ ಬಂದವರಿದ್ದಾರೆ. ಅವರನ್ನೂ ಸಸ್ಪೆಂಡ್ ಮಾಡ್ತೀರಾ ಎಂದು ಪ್ರಿಯಾಂಕ್ ಖರ್ಗೆಗೆ ಪ್ರಶ್ನೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಸ್ಟರ್ ಕ್ಲೀನ್, ಸ್ಮಶಾನ ಭೂಮಿ, ಕೆರೆ ಅಂಗಳವನ್ನು ತಮ್ಮ ಹೆಸರಿಗೆ ಮಾಡಿಕೊಂಡದ್ದು ಹೇಗೆ

ಆರೋಗ್ಯದಲ್ಲಿ ಏರುಪೇರು, ವಿಶ್ರಾಂತಿಯಲ್ಲಿರುವ ಸಿದ್ದರಾಮಯ್ಯರನ್ನು ಭೇಟಿಯಾದ ಪುತ್ರ ಯತೀಂದ್ರ

ಎಐ ದುರ್ಬಳಕೆ ಬಗ್ಗೆ ಶ್ರೀಲೀಲಾ ಗರಂ, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡ ನಟಿ

ಗೋವಾ ನೈಟ್‌ಕ್ಲಬ್ ದುರಂತ, ಪರಾರಿಯಾಗಿದ್ದ ಮಾಲಕ ಸಹೋದರರ ವಿಚಾರಣೆ

ಖಾಕಿ ಮೇಲೆ ಕೈ ಹಾಕಿದ ಮೂವರು ಮೂವರಿಗೆ 7 ವರ್ಷ ಜೈಲೇ ಗತಿ

ಮುಂದಿನ ಸುದ್ದಿ
Show comments