Publish Date: Sat, 14 Oct 2017 (14:09 IST)
Updated Date: Sat, 14 Oct 2017 (14:11 IST)
ಕಾಂಗ್ರೆಸ್ ನಾಯಕರ ವರ್ತನೆಗೆ ಬೇಸತ್ತು ಪಕ್ಷಕ್ಕೆ ಗುಡ್‌ಬೈ ಹೇಳುತ್ತಿರುವುದಾಗಿ ಚನ್ನಪಟ್ಟಣ ಶಾಸಕ ಸಿ.ಪಿ.ಯೋಗೇಶ್ವರ್ ಹೇಳಿದ್ದಾರೆ.
ರಾಮನಗರದಲ್ಲಿ ಕರೆದ ದಿಢೀರ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನನ್ನ ಬೆಳವಣಿಗೆಯನ್ನು ಸಹಿಸದ ಸಚಿವ ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ಟಿಕೆಟ್ ತಪ್ಪಲು ಕಾರಣವಾಗಿದ್ದಾರೆ ಎಂದು ಆರೋಪಿಸಿದ್ದಾರೆ.
ಕಾಂಗ್ರೆಸ್ ಸದಸ್ಯರ ನಡುವಳಿಕೆಗೆ ಬೇಸತ್ತು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ತಿಳಿಸಿದ್ದಾರೆ.
ಅಕ್ಟೋಬರ್ 22 ರಂದು ಚನ್ನಪಟ್ಟಣದಲ್ಲಿ ಕಾರ್ಯಕರ್ತರ, ಬೆಂಬಲಿಗರ ಸಭೆ ನಡೆಸಿ, ನಂತರ ಮುಂದಿನ ತೀರ್ಮಾನ ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ.
ಸಮಾಜವಾದಿ ಪಕ್ಷದಿಂದ ಆಯ್ಕೆಯಾಗಿ ಕಾಂಗ್ರೆಸ್ ಸೇರಿದ್ದ ಯೋಗೇಶ್ವರ್, ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದರೂ ಯಾರೊಬ್ಬ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಸಂಪರ್ಕಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.