Publish Date: Mon, 22 May 2017 (14:58 IST)
Updated Date: Mon, 22 May 2017 (15:08 IST)
ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರಿಗೆ ಕಾಂಗ್ರೆಸ್ ಶಾಸಕ ಪುಟ್ರಂಗಶೆಟ್ಟಿ ಹಾರ ಹಾಕಿ ಶಾಲು ಹೊದಿಸಿ ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದಾರೆ. ಇದರಿಂದಾಗಿ ಪುಟ್ಟರಂಗಶೆಟ್ಟಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎನ್ನುವ ವದಂತಿಗಳು ಹರಡಿವೆ.
ಚಾಮರಾಜನಗರ ಶಾಸಕ ಪುಟ್ಟರಂಗಶೆಟ್ಟಿ ಪ್ರವಾಸಿ ಮಂದಿರದಲ್ಲಿದ್ದ ದೇವೇಗೌಡರನ್ನು ಭೇಟಿಯಾಗಿ ಕೆಲ ಕಾಲ ಚರ್ಚೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಜೆಡಿಎಸ್ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಳ್ಳಲು ದೇವೇಗೌಡರು ಚಾಮರಾಜನಗರಕ್ಕೆ ಭೇಟಿ ನೀಡಿದ್ದಲ್ಲದೇ ಕಾಂಗ್ರೆಸ್ ಶಾಸಕರೊಬ್ಬರನ್ನು ಪಕ್ಷಕ್ಕೆ ಸೆಳೆಯವಲ್ಲಿ ಯಶಸ್ವಿಯಾಗಿದ್ದಾರೆ ಎನ್ನಲಾಗುತ್ತಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.