Select Your Language

Notifications

webdunia
webdunia
webdunia
webdunia

ಕಾಂಗ್ರೆಸ್ ಶಾಸಕ ವೀರೇಂದ್ರ ಪಪಿ ಮನೆಯಲ್ಲಿ ಕಂತೆ ಕಂತೆ ಹಣ: ಅರೆಸ್ಟ್

Veerendra Papi

Krishnaveni K

ಬೆಂಗಳೂರು , ಶನಿವಾರ, 23 ಆಗಸ್ಟ್ 2025 (15:18 IST)
ಬೆಂಗಳೂರು: ಕಾಂಗ್ರೆಸ್ ಶಾಸ ವೀರೇಂದ್ರ ಪಪಿ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದು ಕಂತೆ ಕಂತೆ ಹಣ ಪತ್ತೆಯಾಗಿದೆ. ಈ ಹಿನ್ನಲೆಯಲ್ಲಿ ಅವರನ್ನು ಅರೆಸ್ಟ್ ಮಾಡಲಾಗಿದೆ.

ವೀರೇಂದ್ರ ಪಪಿಯವರನ್ನು ಈಗಾಗಲೇ ಬಂಧಿಸಿದ ಇಡಿ ಅಧಿಕಾರಿಗಳು ಬಂಧಿಸಿ ಕೋರ್ಟ್ ಗೆ ಹಾಜರುಪಡಿಸಿರುವ ಇಡಿ ಟ್ರಾನ್ಸಿಟ್ ವಾರಂಟ್ ಮೇಲೆ ಬೆಂಗಳೂರು ಕೋರ್ಟ್ ಗೆ ಹಾಜರುಪಡಿಸಲಿದ್ದಾರೆ. ಇಡಿ ಅಧಿಕಾರಿಗಳಿಗೆ ದಾಳಿ ವೇಳೆ 12 ಕೋಟಿ ರೂ. ನಗದು, 6 ಕೋಟಿ ರೂ. ಮೌಲ್ಯದ ಚಿನ್ನ,  10 ಕೆ.ಜಿ ಬೆಳ್ಳಿ ಸಿಕ್ಕಿದೆ.

ಅಕ್ರಮ ಆನ್ ಲೈನ್ ಮತ್ತು ಆಫ್ ಲೈನ್ ಬೆಟ್ಟಿಂಗ್ ಗೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ನಿನ್ನೆಯೇ ಚಿತ್ರದುರ್ಗದ ಶಾಸಕ ವೀರೇಂದ್ರ ಪಪಿ ಮತ್ತು ಇತರೆ 30 ಕಡೆ ದಾಳಿ ನಡೆಸಿದ್ದರು. ಈ ವೇಳೆ ಅಪಾರ ಪ್ರಮಾಣದ ಹಣ, ಚಿನ್ನ,ಬೆಳ್ಳಿ ವಶಪಡಿಸಿಕೊಳ್ಳಲಾಗಿದೆ.

ವೀರೇಂದ್ರ ಪಪಿ ಮತ್ತು ಸಹೋದರ ಹಲವು ವ್ಯವಹಾರಗಳನ್ನು ಹೊಂದಿದ್ದಾರೆ. ಈ ಪೈಕಿ ಸಹೋದರ ಕೆಸಿ ತಿಪ್ಪೇಸ್ವಾಮಿ ಕಾಲ್ ಸೆಂಟರ್ ಮತ್ತು ಗೇಮಿಂಗ್ ವ್ಯವಹಾರಗಳಿಗೆ ಸಂಬಂಧಿಸಿದ ವ್ಯವಹಾರಗಳೂ ಇವೆ.

Share this Story:

Follow Webdunia kannada

ಮುಂದಿನ ಸುದ್ದಿ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ