Webdunia - Bharat's app for daily news and videos

Install App

Select Your Language

Notifications

webdunia
webdunia
webdunia
webdunia

ಅಪರೇಷನ್ ಕಮಲದ ಭೀತಿಗೆ ರೆಸಾರ್ಟ್‌ಗೆ ತೆರಳಿದ ಕಾಂಗ್ರೆಸ್ ಶಾಸಕರು

webdunia
ಶನಿವಾರ, 19 ಜನವರಿ 2019 (07:05 IST)
ಬೆಂಗಳೂರು : ನಿನ್ನೆ ನಡೆದ ಶಾಸಕಾಂಗ ಪಕ್ಷದ ಸಭೆ ನಂತರ ಸಭೆಗೆ ಹಾಜರಾಗಿರುವ ಎಲ್ಲ ಕಾಂಗ್ರೆಸ್ ಶಾಸಕರೆಲ್ಲರನ್ನೂ ರೆಸಾರ್ಟ್‌ಗೆ ಕೊಂಡೊಯ್ಯಲು ನಿರ್ಧರಿಸಲಾಗಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ.


ಸಭೆ ಮುಕ್ತಾಯವಾದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ ಅವರು,’ 80ರಲ್ಲಿ ಒಟ್ಟು 76 ಶಾಸಕರು ಸಭೆಗೆ ಹಾಜರಾಗಿದ್ದಾರೆ. ಉಮೇಶ್ ಜಾಧವ್ ಆನಾರೋಗ್ಯ ಹಿನ್ನೆಲೆಯಲ್ಲಿ ಸಭೆ ಬಂದಿಲ್ಲ. ಶಾಸಕ ನಾಗೇಂದ್ರ ಅವರು ಕೋರ್ಟ್ ಕೆಲಸದಲ್ಲಿದ್ದರಿಂದ ಬರೋದಕ್ಕೆ ಆಗಿಲ್ಲ. ರಮೇಶ್ ಜಾರಕಿಹೊಳಿ ಮತ್ತು ಮಹೇಶ್ ಕುಮಟಳ್ಳಿ ಸಂಪರ್ಕಕ್ಕೆ ಸಿಗುತ್ತಿಲ್ಲ. ಶಾಸಕಾಂಗ ಸಭೆಗೆ ಗೈರಾಗಿರುವ ಶಾಸಕರಿಗೆ ನೋಟಿಸ್ ನೀಡಲಾಗುವುದು’  ಎಂದು ತಿಳಿಸಿದ್ದಾರೆ.


ನಿನ್ನೆ ರಾತ್ರಿ 7 ಗಂಟೆ ಸುಮಾರಿಗೆ ವಿಧಾನಸೌಧಕ್ಕೆ ಆಗಮಿಸಿದ್ದ ಎರಡು ಖಾಸಗಿ ಟ್ರಾವೆಲ್ಸ್ ನ ಬಸ್ ಗಳಲ್ಲಿ ಕಾಂಗ್ರೆಸ್ ಶಾಸಕರು ರೆಸಾರ್ಟ್‌ನತ್ತ ಪ್ರಯಾಣ ಬೆಳೆಸಿದರು. ಹಾಗೇ ಬಿಜೆಪಿ ನೀಡುತ್ತಿರುವ ಕಿರುಕುಳ ತಪ್ಪಿಸಿಕೊಳ್ಳುವದಕ್ಕಾಗಿ ಎಲ್ಲ ಶಾಸಕರನ್ನು ಕರೆದುಕೊಂಡು ರೆಸಾರ್ಟ್ ಗೆ ಹೋಗುತ್ತಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia Hindi

ಮುಂದಿನ ಸುದ್ದಿ

ವಾರ್ಷಿಕ ಟಾರ್ಗೆಟ್ ರೀಚ್ ಮಾಡದ ನೌಕರರಿಗೆ ಚೀನಾದ ಕಂಪೆನಿ ವಿಧಿಸಿದ ಶಿಕ್ಷೆ ಏನು ಗೊತ್ತಾ?