ಹೊಸ ಸಿಎಂ ಕ್ಯಾಬಿನೆಟ್ ಎನ್ನುವಾಗಲೇ ಕಾಂಗ್ರೆಸ್ ನಲ್ಲಿ ಶುರುವಾಯ್ತು ಇದಕ್ಕೆ ಹೊಯ್ದಾಟ

ಕೃಷ್ಣವೇಣಿ ಕೆ
ಶುಕ್ರವಾರ, 29 ಮೇ 2026 (14:19 IST)
ಬೆಂಗಳೂರು: ಸಿದ್ದರಾಮಯ್ಯ ರಾಜೀನಾಮೆ ಕೊಟ್ಟಾಯ್ತು, ಹೊಸ ಸಿಎಂ , ಹೊಸ ಕ್ಯಾಬಿನೆಟ್ ರಚನೆಯಾಗಲಿದೆ ಎಂದಾಗಲೇ ಇದೊಂದು  ವಿಚಾರಕ್ಕೆ ಹೊಯ್ದಾಟ ಶುರುವಾಗಿದೆ.

ಸಿದ್ದರಾಮಯ್ಯ ರಾಜೀನಾಮೆ ನೀಡುತ್ತಿದ್ದಂತೇ ಡಿಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗುವುದು ಬಹುತೇಕ ಪಕ್ಕಾ ಆಗಿದೆ. ನಾಳೆ ಈ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡುವುದೊಂದೇ ಬಾಕಿಯಿದೆ. ಇದಕ್ಕಾಗಿ ಡಿಕೆ ಶಿವಕುಮಾರ್ ಈಗಾಗಲೇ ದೆಹಲಿಯಲ್ಲಿ ಬೀಡುಬಿಟ್ಟಿದ್ದಾರೆ.

ಇದರ ನಡುವೆ ಈಗ ಹೊಸ ಕ್ಯಾಬಿನೆಟ್ ನಲ್ಲಿ ಯಾರಿಗೆಲ್ಲಾ ಮಂತ್ರಿಗಿರಿ ಸಿಗಬಹುದು ಎಂಬ ಲೆಕ್ಕಾಚಾರ ಶುರುವಾಗಿದೆ. ಕಾಂಗ್ರೆಸ್ ನಲ್ಲಿ ಸಚಿವ ಆಕಾಂಕ್ಷಿಗಳು ಈಗ ಮಂತ್ರಿಗಿರಿಗಾಗಿ ಲಾಬಿ ನಡೆಸಲು ಶುರು ಮಾಡಿದ್ದಾರೆ. ಸಚಿವ ಸ್ಥಾನ ಆಕಾಂಕ್ಷಿಗಳು ಇಂದು ಬೆಳಿಗ್ಗೆಯೇ ದಂಡು ದಂಡಾಗಿ ದೆಹಲಿಗೆ ತೆರಳಿದ್ದಾರೆ. ಸಿದ್ದರಾಮಯ್ಯ ಸಂಪುಟದಲ್ಲಿರುವ ಎಲ್ಲಾ ಸಚಿವರಿಗೆ ಮತ್ತೆ ಸ್ಥಾನ ಸಿಗುವ ಸಾಧ್ಯತೆಯಿಲ್ಲ. ಅವಕಾಶ ಸಿಗದವರಿಗೆ ಈ ಬಾರಿ ಅವಕಾಶ ನೀಡುವ ಸಾಧ್ಯತೆಯಿದೆ. ಅಲ್ಲದೆ, ಡಿಕೆಶಿ ಆಪ್ತರಾಗಿರುವ ಕೆಲವು ಶಾಸಕರೂ ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದಾರೆ.

ಈಗಾಗಲೇ ಸಚಿವರಾಗಿದ್ದ ಪ್ರಿಯಾಂಕ್ ಖರ್ಗೆ, ಡಾ ಪರಮೇಶ್ವರ್, ಎಚ್ ಕೆ ಪಾಟೀಲ್, ಕೃಷ್ಣಭೈರೇಗೌಡ, ದಿನೇಶ್ ಗುಂಡೂರಾವ್, ಕೆಜೆ ಜಾರ್ಜ್, ಈಶ್ವರ ಖಂಡ್ರೆ, ಸತೀಶ್ ಜಾರಕಿಹೊಳಿ, ಸಂತೋಷ್ ಲಾಡ್, ಶಿವರಾಜ್ ತಂಗಡಗಿ ಮಂತ್ರಿಗಿರಿ ಉಳಿಸಿಕೊಳ್ಳುವ ನಿರೀಕ್ಷೆಯಿದೆ. ಇದರ ಹೊರತಾಗಿ ಡಿಕೆಶಿ ಆಪ್ತರೂ ಸಂಪುಟ ಸೇರ್ಪಡೆಯಾಗುವ ಸಾಧ್ಯತೆಯಿದೆ. ಇದಕ್ಕಾಗಿ ಈಗ ದೆಹಲಿಯಲ್ಲಿ ಭಾರೀ ಚರ್ಚೆ ನಡೆಯುತ್ತಿದೆ. ಇದೇ ಕಾರಣಕ್ಕೆ ಆಕಾಂಕ್ಷಿಗಳು ದೆಹಲಿಗೇ ಹೋಗಿ ಲಾಬಿ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೊಸ ಸಿಎಂ ಕ್ಯಾಬಿನೆಟ್ ಎನ್ನುವಾಗಲೇ ಕಾಂಗ್ರೆಸ್ ನಲ್ಲಿ ಶುರುವಾಯ್ತು ಇದಕ್ಕೆ ಹೊಯ್ದಾಟ

ಇದ್ದಕ್ಕಿದ್ದಂತೆ ಮನೆಯ ಎಸಿ ಸ್ಫೋಟ: ಮಾಜಿ ದಕ್ಷ ಐಎಎಸ್ ಅಧಿಕಾರಿ ಧನೇಂದ್ರ ಕುಮಾರ್ ದಾರುಣ ಸಾವು

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಖ್ಯಮಂತ್ರಿ ಪಟ್ಟದತ್ತ ಡಿ.ಕೆ. ಶಿವಕುಮಾರ್‌: ನಾಳೆ ಸಂಜೆಯೇ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ

ಥ್ಯಾಂಕ್ಸ್ ಮೇಡಂ... ಸೋನಿಯಾ ನಿವಾಸಕ್ಕೆ ಬಂದ ಸಿದ್ದರಾಮಯ್ಯ ಹೇಳಿದ್ದಿಷ್ಟು

ಮುಂದಿನ ಸುದ್ದಿ
Show comments