Daily Horoscope
✕

ಮಂತ್ರಿ ಆಗಕ್ಕೆ ಮಾಜಿ ಮುಖ್ಯ ಮಂತ್ರಿಗಳ ಮಕ್ಕಳೇ ಆಗಬೇಕಾ: ಕಾಂಗ್ರೆಸ್ ಗೆ ಬಿಗ್ ಶಾಕ್ ಕೊಟ್ಟ ಇಬ್ಬರು ಶಾಸಕರು

ಕೃಷ್ಣವೇಣಿ ಕೆ
ಸೋಮವಾರ, 3 ಆಗಸ್ಟ್ 2026 (16:37 IST)
ಬೆಂಗಳೂರು: ನೂತನ ಸಚಿವರ ಪಟ್ಟಿ ಹೊರಬೀಳುತ್ತಿದ್ದಂತೇ ಕಾಂಗ್ರೆಸ್ ನಲ್ಲಿ ಸಚಿವ ಸ್ಥಾನ ವಂಚಿತರ ಅಸಮಾಧಾನ ಸ್ಪೋಟಗೊಂಡಿದೆ. ಸಚಿವರಾಗಲು ಮಾಜಿ ಮುಖ್ಯ ಮಂತ್ರಿಗಳ ಮಕ್ಕಳೇ ಆಗಬೇಕಾ ಎಂದು ಇಬ್ಬರು ಶಾಸಕರು ಈಗಾಗಲೇ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.

ಸಚಿವ ಸ್ಥಾನ ತಪ್ಪಿದ್ದಕ್ಕೆ ಬೇಸರಗೊಂಡಿರುವ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಮತ್ತು ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್ ಶಾಸಕ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ. ಇದು ರಾಜ್ಯ ಕಾಂಗ್ರೆಸ್ ಗೆ ಮತ್ತೊಂದು ತಲೆನೋವಾಗಿದೆ.

ಸಚಿವ ಸಂಪುಟ ವಿಸ್ತರಣೆಯಾಗುತ್ತದೆ ಎಂದಾಗ ಹಲವು ಶಾಸಕರು ಹೈಕಮಾಂಡ್ ಗೆ ತಮ್ಮ ಪರ ಲಾಬಿ ನಡೆಸಲು ಪ್ರಯತ್ನಿಸಿದ್ದರು. ಕೆಲವರು ಬಹಿರಂಗವಾಗಿಯೇ ನಮಗೆ ಸಚಿವ ಸ್ಥಾನ ಬೇಕು ಎಂದು ಕೇಳಿದ್ದರು. ಈ ಬಾರಿ ಹೊಸಬರಿಗೆ ಮಣೆ ಹಾಕಲಾಗುವುದು ಎಂಬ ಮಾತುಗಳಿತ್ತು.

ಆದರೆ ಮತ್ತೆ ಬಹುತೇಕ ಈ ಹಿಂದೆ ಸಚಿವರಾಗಿದ್ದವರಿಗೆ ಸ್ಥಾನ ನೀಡಲಾಗಿದೆ. ಇದು ಹೊಸದಾಗಿ ಸಚಿವ ಸ್ಥಾನ ಸಿಗಬಹುದು ಎಂದು ಕಾದಿದ್ದವರಿಗೆ ಅಸಮಾಧಾನ ತಂದಿದೆ. ಅದರಲ್ಲೂ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಬಹಿರಂಗವಾಗಿಯೇ ತಮ್ಮ ಅಸಮಾಧಾನ ಹೊರಹಾಕಿದ್ದಾರೆ. ‘ನಾನು ನಾಳೆ 10 ಗಂಟೆಗೆ ನನ್ನ ಶಾಸಕ ಸ್ಥಾನ ಮತ್ತು ನಿಗಮ ಮಂಡಳಿ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ. ಮೂರು ವರ್ಷ ಮಂತ್ರಿಯಾದವರಿಗೇ ಮತ್ತೆ ಅವಕಾಶ ಕೊಟ್ಟಿದ್ದಾರೆ. ಮಾಜಿ ಮುಖ್ಯಮಂತ್ರಿ ಮಕ್ಕಳು, ಮಂತ್ರಿಗಳ ಮಕ್ಕಳಿಗೇ ಸಚಿವ ಸ್ಥಾನ ಕೊಡಬೇಕಾ? ಹೊಸಬರಿಗೆ ಅವಕಾಶ ನೀಡುತ್ತೇವೆ ಎಂದಿದ್ದರು. ಇದೇನಾ ಹೊಸಬರಿಗೆ ಅವಕಾಶ ನೀಡಿರೋದು? ನನ್ನ ಜೊತೆ ಹಲವು ಶಾಸಕರು ರಾಜೀನಾಮೆ ನೀಡಲಿದ್ದಾರೆ’ ಎಂದು ಬಹಿರಂಗವಾಗಿ ಆಕ್ರೋಶ ಹೊರಹಾಕಿದ್ದಾರೆ. ಇದೀಗ ಕಾಂಗ್ರೆಸ್ ಭಿನ್ನಮತ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಡೀ ಸರ್ಕಾರವೇ ಭ್ರಷ್ಟಾಚಾರದಲ್ಲಿ ಮುಳುಗಿದೆ: ಸಿ.ಟಿ.ರವಿ

ಸ್ಟಿಂಗ್ ಆಪರೇಷನ್ ಸಿನಿಮಾದ ನಿರ್ಮಾಪಕ, ನಿರ್ದೇಶಕ ಯಾರು: ಬಿ.ಶ್ರೀರಾಮುಲು

ಇದ್ದಕ್ಕಿದ್ದಂತೆ ಗಂಡಕಿ ನದಿಯಲ್ಲಿ ನುಗ್ಗಿ ಬಂದ ಪ್ರವಾಹ: ಭೀಕರ ದೃಶ್ಯ ಸೆರೆ Video

ಪೊಲೀಸ್ ಕಸ್ಟಡಿಯಲ್ಲಿದ್ದ ಅಭಿಜಿತ್ ದಿಪ್ಕೆ ಮತ್ತು ಸ್ನೇಹಿತರು ಕೊನೆಗೂ ರಿಲೀಸ್: ಆದರೆ ಷರತ್ತು ಅನ್ವಯ

ಪ್ರಧಾನಿ ಮೋದಿ ಮತ್ತು ಸಿಎಂ ವಿಜಯ್ ಮೆಟ್ರೋದಲ್ಲಿ ಪ್ರಯಾಣ

ಮುಂದಿನ ಸುದ್ದಿ
Show comments