ರಾಜ್ಯಾದ್ಯಂತ ಶಾಲೆಗಳಲ್ಲಿ ಮೂಲಸೌಕರ್ಯದ ಕೊರತೆ ಇದೆ.ಶೌಚಾಲಯವಿಲ್ಲದೆ ಮಕ್ಕಳು ಪರದಾಡುತ್ತಿದ್ದಾರೆ.ಸಿಎಂ ಅಂಕಲ್,
ಕೇಸರಿ ಬಣ್ಣ ಬಳಿಯುವಿರಂತೆ,ಆದರೆ ಮೊದಲು ಶೌಚಾಲಯ ಕಟ್ಟಿಸಿಕೊಡಿ.ಕುಡಿಯಲು ಶುಚಿಯಾದ ನೀರು ಕೊಡಿ,ಶಾಲೆಗಳು ಮಕ್ಕಳನ್ನು ಆಕರ್ಷಿಸುವಂತೆ ಮಾಡಿಕೊಡಿ.ಕೋವಿಡ್ ನಂತರ ರಾಜ್ಯದಲ್ಲಿ 10 ಲಕ್ಷಕ್ಕೂ ಹೆಚ್ಚು ಮಕ್ಕಳು ಶಿಕ್ಷಣದಿಂದ ಹೊರಗುಳಿದಿದ್ದಾರೆ.ಬಾಲಕಾರ್ಮಿಕರ ಸಂಖ್ಯೆ ಏರಿಕೆಯಾಗಿದೆ,ಬಾಲ್ಯವಿವಾಹವೂ ಏರಿಕೆಯಾಗಿದೆ.ಸಿಎಂಅಂಕಲ್,
ಮಕ್ಕಳನ್ನು ಮರಳಿ ಶಾಲೆಗೆ ಕರೆತರಲು ಯೋಜನೆ ರೂಪಿಸುವುದನ್ನು ಬಿಟ್ಟು ಬಣ್ಣ ಬಳಿಯುವ ಬಣ್ಣ ಬಣ್ಣದ ಮಾತಾಡಿಕೊಂಡು ಕುಳಿತಿರುವುದೇಕೆ?ಎಂದು ಕಾಂಗ್ರೆಸ್ ಸರಣಿ ಟ್ವೀಟ್ ಮೂಲಕ ವ್ಯಂಗ್ಯ ವ್ಯಕ್ತಪಡಿಸಿದೆ.