Select Your Language

Notifications

webdunia
webdunia
webdunia
webdunia

ದಕ್ಷಿಣ ಕನ್ನಡ ಜಿಲ್ಲೆಯ 8 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲಲೇಬೇಕು: ವೇಣುಗೋಪಾಲ್

ದಕ್ಷಿಣ ಕನ್ನಡ ಜಿಲ್ಲೆಯ 8 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲಲೇಬೇಕು: ವೇಣುಗೋಪಾಲ್
ಮಂಗಳೂರು , ಶುಕ್ರವಾರ, 7 ಜುಲೈ 2017 (19:40 IST)
ದಕ್ಷಿಣ ಕನ್ನಡ ಜಿಲ್ಲೆಯ 8 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲಲೇಬೇಕು ಎಂದು ಕಾಂಗ್ರೆಸ್ ಪಕ್ಷದ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಹೇಳಿದ್ದಾರೆ.
 
ಕಾಂಗ್ರೆಸ್ ಪಕ್ಷ ಎಂಟು ಕ್ಷೇತ್ರಗಳಲ್ಲಿ ಗೆಲ್ಲಲು ಸಚಿವರು, ಶಾಸಕರು ಮತ್ತು ಕಾರ್ಯಕರ್ತರು ಶ್ರಮಿಸಬೇಕು ಎಂದು ಕರೆ ನೀಡಿದ್ದಾರೆ. 
 
ಮುಂಬರುವ ವಿಧಾನಸಭೆ ಚುನಾವಣೆ ಕಾಂಗ್ರೆಸ್ ಪಾಲಿಗೆ ಪ್ರತಿಷ್ಠೆಯ ಚುನಾವಣೆಯಾಗಿದೆ. ರಾಜ್ಯದಲ್ಲಿ ಮತ್ತೊಂದು ಬಾರಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಬೇಕಾಗಿದೆ ಎಂದು ತಿಳಿಸಿದ್ದಾರೆ.
 
ಕೇಂದ್ರದಲ್ಲಿರುವ ಮೋದಿ ಸರಕಾರ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿರುವ ರೈತರ ಸಾಲ ಮನ್ನಾ ಮಾಡಬೇಕು. ಇಲ್ಲವಾದಲ್ಲಿ ಸಂಸತ್ ಕಲಾಪ ನಡೆಯಲು ಬಿಡುವುದಿಲ್ಲ ಎಂದು ಕೆ.ಸಿ.ವೇಣುಗೋಪಾಲ್ ಗುಡುಗಿದ್ದಾರೆ.  
 
ಕರಾವಳಿ ಭಾಗದಲ್ಲಿ ಅಶಾಂತಿ ತಾಂಡವ
 
ಕರಾವಳಿ ಭಾಗದಲ್ಲಿ ಕೆಲ ಸಂಘಟನೆಗಳು ಅಶಾಂತಿ ಸೃಷ್ಟಿಸುವ ಹುನ್ನಾರಗಳಲ್ಲಿ ತೊಡಗಿವೆ. ಇಂತಹ ಸಂಘಟನೆಗಳ ವಿರುದ್ಧ ನಿರ್ಧಾಕ್ಷಿಣ್ಯವಾಗಿ ಕ್ರಮಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಬಿಸಿಸಿಐ ಮಾಜಿ ಅಧ್ಯಕ್ಷ ಅನುರಾಗ್ ಠಾಕೂರ್ ಗೆ ಖುದ್ದು ಕ್ಷಮೆಯಾಚನೆಗೆ ಸುಪ್ರೀಂ ಸೂಚನೆ