Select Your Language

Notifications

webdunia
webdunia
webdunia
webdunia

ಕಾಂಗ್ರೆಸ್ ಅವಿಶ್ವಾಸ ನಿರ್ಣಯಕ್ಕೆ ಭಾರೀ ಮುಖಭಂಗ: ಕಿಂಗ್‌ಮೇಕರ್ ಆದ ಕುಮಾರಸ್ವಾಮಿ

ಕಾಂಗ್ರೆಸ್ ಅವಿಶ್ವಾಸ ನಿರ್ಣಯಕ್ಕೆ ಭಾರೀ ಮುಖಭಂಗ: ಕಿಂಗ್‌ಮೇಕರ್ ಆದ ಕುಮಾರಸ್ವಾಮಿ
ಬೆಂಗಳೂರು , ಗುರುವಾರ, 15 ಜೂನ್ 2017 (14:13 IST)
ವಿಧಾನಪರಿಷತ್ ಸಭಾಪತಿ ಡಿ.ಎಚ್.ಶಂಕರ್‌ಮೂರ್ತಿ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆಗೆ ಸೋಲಾಗಿದ್ದು ಅವರ ಸ್ಥಾನ ಅಭಾದಿತವಾಗಿ ಮುಂದುವರಿಯಲಿದೆ.
 
ಸದನದಲ್ಲಿ ಅವಿಶ್ವಾಸ ನಿರ್ಣಯ ಮಂಡಿಸಿದ್ದ ಕಾಂಗ್ರೆಸ್, ಅವಿಶ್ವಾಸ ನಿರ್ಣಯದ ಪರವಾಗಿ 36 ಮತಗಳು ಬಿದ್ದರೆ, ಅವಿಶ್ವಾಸ ನಿರ್ಣಯದ ವಿರುದ್ಧವಾಗಿ 37 ಮತಗಳು ಬಂದಿದ್ದರಿಂದ ಸೋಲನುಭವಿಸಬೇಕಾಯಿತು.
 
ಕುಮಾರಸ್ವಾಮಿ ನೇತೃತ್ವದ ಜೆಡಿಎಸ್ ಪಕ್ಷದ ವಿಧಾನಪರಿಷತ್ ಸದಸ್ಯರು ಬಿಜೆಪಿ ಪರವಾಗಿ ಮತಹಾಕಿದರು. ನಿನ್ನೆಯಿಂದಲೇ ಕಾಂಗ್ರೆಸ್, ಜೆಡಿಎಸ್ , ಬಿಜೆಪಿ ಪಕ್ಷಗಳು ತಮ್ಮದೇ ಆದ ರಾಜಕೀಯ ರಣತಂತ್ರ ರೂಪಿಸುವಲ್ಲಿ ನಿರತವಾಗಿದ್ದವು.
 
ಅವಿಶ್ವಾಸ ನಿರ್ಣಯ ಮಂಡಿಸಿ ಸೋಲನುಭವಿಸಿದ ಹಿನ್ನೆಲೆಯಲ್ಲಿ ಹಿರಿಯ ನಾಯಕರು ವಿ.ಎಸ್.ಉಗ್ರಪ್ಪ ವಿರುದ್ಧ ಅಸಮಾದನ ವ್ಯಕ್ತಪಡಿಸಿ, ಅವಿಶ್ವಾಸ ನಿರ್ಣಯ ಮಂಡನೆಗೆ ಮುನ್ನ ಪೂರ್ವ ಸಿದ್ದತೆ ನಡೆಸಿಲ್ಲ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. 
 
 ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಗೋಮಾಂಸ ಸೇವನೆ ಪ್ರತಿಷ್ಠೆಯ ಸಂಕೇತವೆನ್ನುವವರನ್ನು ಗಲ್ಲಿಗೇರಿಸಿ: ಸಾಧ್ವಿ ಸರಸ್ವತಿ