Select Your Language

Notifications

webdunia
webdunia
webdunia
webdunia

ಬೆಲೆ ಏರಿಕೆ ಖಂಡಿಸಿ ಪ್ರತಿಭಟಿಸಲು ಕಾಂಗ್ರೆಸ್ ಗೆ ನೈತಿಕ ಹಕ್ಕಿಲ್ಲ: ಸಿಎಂ ಬಸವರಾಜ ಬೊಮ್ಮಾಯಿ

Congress protest  basavaraja bommai karnataka ಕರ್ನಾಟಕ ಬಸವರಾಜ ಬೊಮ್ಮಾಯಿ ಪ್ರತಿಭಟನೆ
bengaluru , ಸೋಮವಾರ, 11 ಏಪ್ರಿಲ್ 2022 (14:35 IST)
ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಗೆ ಪ್ರತಿಭಟನೆ ಮಾಡುವ ನೈತಿಕ ಹಕ್ಕಿಲ್ಲ. ದೇಶದಲ್ಲಿ ಅತಿಹೆಚ್ವು ಬೆಳೆಯೇರಿಕೆ ಮಾಡಿದ ಖ್ಯಾತಿ, ಕೀರ್ತಿ, ದಾಖಲೆ ಕಾಂಗ್ರೆಸ್ ನದ್ದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.
ಬೆಂಗಳೂರಿನಲ್ಲಿ ಸೋಮವಾರ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಲೆ ಏರಿಕೆ ಖಂಡಿಸಿ ರಾಜ್ಯಾದ್ಯಂತ ಕಾಂಗ್ರೆಸ್‌ ಪ್ರತಿಭಟನೆಗೆ ಕರೆ ನೀಡಿರುವುದಕ್ಕೆ ಅವರು ಪ್ರತಿಕ್ರಿಯೆ ನೀಡಿದರು.
ಪಿಎಫ್ ಐ ವಿದ್ಯಾರ್ಥಿಗಳ ಪ್ರತಿಭಟನೆ ಕುರಿತಂತೆ ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ರಚಿಸಿರುವ ಸಮಿತಿ ಪರಾಮರ್ಶೆ ಮಾಡುತ್ತಿದ್ದು ವರದಿ ಬಂದ ಕೂಡಲೇ ತೀರ್ಮಾನ ಮಾಡಲಾಗುವುದು ಎಂದರು.
ಮುಸ್ಕಾನ್ ಅವರಿಗೆ ಅಲ್ ಖೈದಾ ಮುಖ್ಯಸ್ಥರು ನೀಡಿರುವ ಬೆಂಬಲಕ್ಕೆ ಸಂಬಂಧಿಸಿದಂತೆ ಅನಂತ ಕುಮಾರ್ ಹೆಗಡೆ ಅವರು ಪತ್ರ ಬರೆದಿದ್ದಾರೆ. ಈ ಬಗ್ಗೆ ತನಿಖೆಯಾಗಿದೆಯೇ ಎನ್ನುವ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಏನಿದೆ ಎಂದು ಗೊತ್ತಿಲ್ಲ. ಅನಂತಕುಮಾರ್ ಹೆಗಡೆ ಅವರ ಬಳಿ ಚರ್ಚೆ ಮಾಡಿ ಅವರ ಬಳಿ ಇರುವ ಮಾಹಿತಿ ಬಗ್ಗೆ ತಿಳಿದುಕೊಳ್ಳಲಾಗುವುದು.ಅದರ ಆಧಾರದ ಮೇಲೆ ಮುಂದಿನ ಕ್ರಮ ಜರುಗಿಸಲಾಗುವುದು ಎಂದರು.
ಸುಮಲತಾ ಅಂಬರೀಶ್ ಅವರು ಬಿಜೆಪಿ ಸೇರುತ್ತಿದ್ದಾರೆಯೇ ಎನ್ನುವ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಅವರ ಸಹೋದರಿಯ ಮಗಳ ಮದುವೆಗೆ ಆಹ್ವಾನಿಸಲು ಬಂದಿದ್ದರು. ಕೆಲವು ಅಭಿವೃದ್ಧಿ ಕೆಲಸಗಳ ಬಗ್ಗೆ ಚರ್ಚಿಸಲಾಯಿತು ಎಂದರು.

Share this Story:

Follow Webdunia kannada

ಮುಂದಿನ ಸುದ್ದಿ

ಕಾಂಗ್ರೆಸ್‌ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಗೆ ಇಡಿ ಸಮನ್ಸ್!