ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದುಆಯೋಜಿಸಿರುವ ಜಿ20 ನಾಯಕರುಗಳ ಔತಣಕೂಟಕ್ಕೆ ಆಹ್ವಾನಿಸಿರುವ ಪ್ರಮುಖ ಅತಿಥಿಗಳ ಪೈಕಿ ರಾಜ್ಯಸಭೆಯ ವಿಪಕ್ಷ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಆಹ್ವಾನ ನೀಡಲಾಗಿಲ್ಲ.ಈ ಬಗ್ಗೆ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಖರ್ಗೆಗೆ ಆಹ್ವಾನ ನೀಡದೇ ಸರ್ಕಾರವು ದೇಶದಲ್ಲಿರುವ ಶೇ.60ರಷ್ಟು ಜನರ ನಾಯಕನಿಗೆ ಬೆಲೆ ಕೊಡುವುದಿಲ್ಲ ಎಂಬುದನ್ನು ತೋರಿಸುತ್ತದೆ.ಬಿಜೆಪಿ ಸರ್ಕಾರ ಏನು ಮಾಡುತ್ತಿದೆ ಮತ್ತು ಅದರ ಹಿಂದಿನ ಉದ್ದೇಶವೇನು ಎಂಬುದನ್ನು ಜನರು ಯೋಚಿಸಬೇಕು ಎಂದಿದ್ದಾರೆ. ಈ ಮೂಲಕ ಖರ್ಗೆ ಅವರು ದಲಿತ ಎಂಬ ಕಾರಣಕ್ಕೆ ಅವರಿಗೆ ಆಹ್ವಾನ ನೀಡಿಲ್ಲ ಎಂದು ಪರೋಕ್ಷವಾಗಿ ಕಿಡಿಕಾರಿದ್ದಾರೆ.