ಕಾಂಗ್ರೆಸ್ ಪಕ್ಷದ ಎಂಟರಿಂದ ಹತ್ತು ಹಿರಿಯ ಶಾಸಕರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಬಿಜೆಪಿ ಸಮಾವೇಶದ ಬಗ್ಗೆ ಟೀಕೆ ಮಾಡುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ಹಿಂದುಳಿದ ವರ್ಗಗಳು ದೂರವಾಗುತ್ತಿವೆಯೋ ಎನ್ನುವ ಆತಂಕ ಕಾಡುತ್ತಿದೆ. ಮುಂಬರುವ ದಿನಗಳಲ್ಲಿ ಜನತೆ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.
ಎಸ್.ಎಸ್‌ಟಿ ಸಮುದಾಯದ ಅಭಿವೃದ್ಧಿಗಾಗಿ ರಾಜ್ಯ ಸರಕಾರ ಹಲವಾರು ಭರವಸೆಗಳನ್ನು ನೀಡಿತ್ತು. ಆದರೆ, ಯಾವುದೇ ಭರವಸೆಯನ್ನು ಸರಕಾರ ಈಡೇರಿಸಿಲ್ಲ ಎಂದು ಕಿಡಿಕಾರಿದರು.
ವಾಲ್ಮಿಕಿ ಸಮುದಾಯಕ್ಕೆ ಬಿಜೆಪಿ ಸ್ಪಂದಿಸಿದೆ. ಎಸ್‌ಟಿ ಸಮುದಾಯದ 15 ಕ್ಷೇತ್ರಗಳಲ್ಲಿ ಬಿಜೆಪಿ ರಣಕಹಳ ಮೊಳಗಿಸಲಿದೆ. ಕಾಂಗ್ರೆಸ್ ಮುಳುಗುತ್ತಿರುವ ಹಡುಗು ಎಂದು ಬಿಜೆಪಿ ರಾಜ್ಯಾದ್ಯಕ್ಷ ಬಿ.ಎಸ್.ಯಡಿಯೂರಪ್ಪ ಲೇವಡಿ ಮಾಡಿದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ