Webdunia - Bharat's app for daily news and videos

Install App

ಕಾಂಗ್ರೆಸ್ ಸರಕಾರಕ್ಕೆ ದುಡ್ಡಿನ ಮದವಿದೆ: ಕುಮಾರಸ್ವಾಮಿ

Webdunia
ಶುಕ್ರವಾರ, 23 ಡಿಸೆಂಬರ್ 2016 (10:30 IST)
ಕಾಂಗ್ರೆಸ್ ಸರಕಾರಕ್ಕೆ ದುಡ್ಡಿನ ಮದವಿದೆ. ಸರಕಾರಿ ಯೋಜನೆಗಳ ಹೆಸರಿನಲ್ಲಿ ಪಕ್ಷದ ಪ್ರಜಾರ ಮಾಡುತ್ತಿದ್ದಾರೆ. ಯಾರದೋ ದುಡ್ಡು ಯಲ್ಲಮ್ಮನ ಜಾತ್ರಿ ಎಂಬಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವರ್ತಿಸುತ್ತಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. 
 
ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೂರ್ಯ ಚಂದ್ರರು ಹುಟ್ಟುವುದು ಎಷ್ಟು ಸತ್ಯವೋ, ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರುವುದು ಅಷ್ಟೇ ಸತ್ಯ ಎಂದು ಹೇಳಿದ್ದರು.
 
ಜನವರಿ 15 ರ ಬಳಿಕ ತಿಂಗಳಿಗೆ ಒಂದು ಗ್ರಾಮದಂತೆ ವಿಜಯಪುರ ಜಿಲ್ಲೆಯ 5 ಗ್ರಾಮಗಳಲ್ಲಿ ವಾಸ್ತವ್ಯ ಮಾಡಿ, ಜನತೆಯ ಕಷ್ಟಗಳಿಗೆ ಸ್ಪಂದಿಸಲಿದ್ದೇನೆ ಎಂದು ಭರವಸೆ ನೀಡಿದರು. 
 
ರಾಜ್ಯದಲ್ಲಿ ನೀರಾವರಿ ಯೋಜನೆಗಳಿಗೆ 40 ಸಾವಿರ ಕೋಟಿ ಖರ್ಚು ಮಾಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸುಳ್ಳು ಹೇಳುತ್ತಿದ್ದಾರೆ. ಈ ಕುರಿತು ದಾಖಲೆ ಇದ್ದರೆ ಜನತೆ ಮಂದಿಡಲಿ. ಸಿಎಂ ಭ್ರಮೆಯಲ್ಲಿದ್ದಾರೆ. ಈಗಾಗಲೇ ರಾಜ್ಯದ ಜನತೆ ಸರಕಾರಕ್ಕೆ ಛೀ ಥೂ ಎಂದು ಉಗಿಯುತ್ತಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

ಮುಂದಿನ ಸುದ್ದಿ
Show comments