Webdunia - Bharat's app for daily news and videos

Install App

ಕಾಂಗ್ರೆಸ್ ಪಕ್ಷ ದೇಶ ವಿರೋಧಿ ಕೆಲಸಕ್ಕೆ ಪರೋಕ್ಷವಾಗಿ ಸಹಕಾರ ಇದೆ : ಭಾಸ್ಕರ್ ರಾವ್

Webdunia
ಸೋಮವಾರ, 17 ಏಪ್ರಿಲ್ 2023 (17:03 IST)
ನಿಷೇಧಿತ ಪಿಎಫ್‍ಐ ಮತ್ತು ಎಸ್‍ಡಿಪಿಐ ನಂತಹ ಶಕ್ತಿಗಳೊಂದಿಗೆ ತಾವು ಹೊಂದಿರುವ ಸಂಬಂಧವೇನು ಎಂಬುದನ್ನು ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷಗಳು ಸ್ಪಷ್ಟಪಡಿಸಬೇಕು ಎಂದು ರಾಜ್ಯಸಭಾ ಸದಸ್ಯ ಹಾಗೂ ಬಿಜೆಪಿ ರಾಷ್ಟ್ರೀಯ ವಕ್ತಾರ ಸುಧಾಂಶು ದ್ವಿವೇದಿ  ಮತ್ತು ಚಾಮರಾಜಪೇಟೆ ಬಿಜೆಪಿ ಅಭ್ಯರ್ಥಿಯಾದ ಭಾಸ್ಕರ್ ರಾವ್ ಅವರು ಆಗ್ರಹಿಸಿದರು.ಬೆಂಗಳೂರಿನ ಬಿಜೆಪಿ ರಾಜ್ಯ ಮಾಧ್ಯಮ ಕೇಂದ್ರದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದಿನ ಕಾಂಗ್ರೆಸ್ ಸರ್ಕಾರ ಸಾಕ್ಷ್ಯಾಧಾರ ಕೊರತೆ ಇದೆ ಎಂದು ಹೇಳಿ ಪಿಎಫ್‍ಐ, ಎಸ್‍ಡಿಪಿಐ ಕಾರ್ಯಕರ್ತರ ಮೇಲಿನ 1,700 ಪ್ರಕರಣಗಳನ್ನು ಹಿಂತೆಗೆದುಕೊಂಡಿತ್ತು. ಇದು ಆ ಸಂಘಟನೆಗಳ ಮೇಲೆ ಕಾಂಗ್ರೆಸ್‍ಗಿರುವ ಪ್ರೀತಿ ಮತ್ತು ಸಂಬಂಧವನ್ನು ತೋರುತ್ತದೆ ಎಂದು ಟೀಕಿಸಿದರು.ರಾಜ್ಯದಲ್ಲಿ ಹಿಂದಿನ ಕಾಂಗ್ರೆಸ್ ಸರ್ಕಾರ ಹಂಪಿ ಉತ್ಸವ ನಿರ್ಲಕ್ಷಿಸಿ, ಟಿಪ್ಪು ಜಯಂತಿ ಆಚರಣೆಗೆ ಆಸಕ್ತಿ ತೋರಿತು. 2019ರಲ್ಲಿ ಅಂದಿನ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಸಹ ಟಿಪ್ಪುಗೆ ಗೌರವ ನಮನ ಸಲ್ಲಿಸಿದ್ದರು. ಪೌರತ್ವ ಕಾಯ್ದೆ ವಿರೋಧಿಸಿ ನಡೆದ ಪ್ರತಿಭಟನೆಗಳಿಗೆ ಪಿಎಫ್‍ಐ, ಎಸ್‍ಡಿಪಿಐ ಸಂಘಟನೆಗಳು ಕುಮ್ಮಕ್ಕು ನೀಡಿದ್ದವು. ಹಿಜಾಬ್ ವಿವಾದವನ್ನು ಸಹ ಇದೇ ಸಂಘಟನೆಗಳು ಹುಟ್ಟು ಹಾಕಿದ್ದವು ಎಂದು ಅವರು ಆರೋಪಿಸಿದರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

Air India Plane crash: ಜೀವ ಉಳಿಸಿಕೊಳ್ಳಲು ಹಾಸ್ಟೆಲ್ ಕಟ್ಟಡದಿಂದ ಹಾರಿದ ವಿದ್ಯಾರ್ಥಿಗಳು video

ಮುಂದಿನ ಸುದ್ದಿ
Show comments