Publish Date: Fri, 03 Nov 2017 (12:43 IST)
Updated Date: Fri, 03 Nov 2017 (12:44 IST)
ಬಿಜೆಪಿಯ ಪರಿವರ್ತನಾ ಯಾತ್ರೆಗೆ ಕೌಂಟರ್ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಜನ ಆಶೀರ್ವಾದ ರ್ಯಾಲಿ ಹಮ್ಮಿಕೊಳ್ಳಲು ಕಾಂಗ್ರೆಸ್ ಚಿಂತನೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ.
ಮುಂದಿನ ವಾರ ಜನ ಆಶೀರ್ವಾದ ರ್ಯಾಲಿಯ ರೂಪರೇಷೆಗಳ ಬಗ್ಗೆ ಅಂತಿಮ ತೀರ್ಮಾನ ಹೊರಬೀಳಲಿದೆ. ಬಿಜೆಪಿಯ ಪರಿವರ್ತನ ಯಾತ್ರೆಯ ಲೋಪಗಳನ್ನು ಗಮನದಲ್ಲಿಟ್ಟುಕೊಳ್ಳಲು ಎಂದು ಕಾಂಗ್ರೆಸ್ ಮುಖಂಡರು ತಿಳಿಸಿದ್ದಾರೆ.
ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ಪಕ್ಷದ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರನ್ನು ಆಹ್ವಾನಿಸಿದಂತೆ ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿಯವರನ್ನು ಆಹ್ವಾನಿಸಲಾಗುವುದು ಎಂದು ಕಾಂಗ್ರೆಸ್ ಮುಖಂಡರು ತಿಳಿಸಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ನೇತೃತ್ವದಲ್ಲಿ ರಾಜ್ಯದಾದ್ಯಂತ ಮತ್ತೊಂದು ರ್ಯಾಲಿ ಹಮ್ಮಿಕೊಳ್ಳಲಾಗುವುದು ಎಂದು ಕೆಪಿಸಿಸಿ ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.