Select Your Language

Notifications

webdunia
webdunia
webdunia
webdunia

ಕಾಂಗ್ರೆಸ್‌ ಜನಪೀಡಕ ಸರ್ಕಾರ: ಗುಡುಗಿದ ಬಿವೈ ವಿಜಯೇಂದ್ರ

BJP President BY Vijayendra, Karnataka Congress Government, CM Siddaramaiah

Sampriya

ಬಾಗಲಕೋಟೆ , ಗುರುವಾರ, 17 ಏಪ್ರಿಲ್ 2025 (19:07 IST)
Photo Credit X
ಬಾಗಲಕೋಟೆ: ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ಇಂದು ಬಾಗಲಕೋಟೆಯಲ್ಲಿ ರಾಜ್ಯಾಧ್ಯಕ್ಷ  ಬಿವೈ ವಿಜಯೇಂದ್ರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

ಬಾಗಲಕೋಟೆಯಲ್ಲಿ ಇಂದು ರಾಜ್ಯದ ಕಡುಭ್ರಷ್ಟ ಹಾಗೂ ಜನವಿರೋಧಿ ಕಾಂಗ್ರೆಸ್ ಸರ್ಕಾರ ಎಂದು ಘೋಷಣೆ ಕೂಗಿ ಬಿಜೆಪಿ ಪ್ರತಿಭಟನೆ ನಡೆಸಿತು.  

ಸುಳ್ಳು ಆಮಿಷಗಳನ್ನೊಡ್ಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ನಾಡಿನ ಅಭಿವೃದ್ಧಿಯೆಡೆಗೆ ಒಂದೇ ಒಂದು ಹೆಜ್ಜೆ ಇಡಲಾರದೆ ಸರಣಿ ರೂಪದಲ್ಲಿ ಭ್ರಷ್ಟಾಚಾರದಲ್ಲಿ ಮುಳುಗಿ ತನ್ನ ಬರಿದಾಗಿರುವ ಬೊಕ್ಕಸ ತುಂಬಿಸಿಕೊಳ್ಳಲು ನಿತ್ಯವೂ ಒಂದಿಲ್ಲೊಂದು ಬೆಲೆ ಏರಿಕೆಯ ಬರೆ ಎಳೆಯುತ್ತಿರುವ ಜನವಿರೋಧಿ ನೀತಿಗಳನ್ನು ಖಂಡಿಸಲಾಯಿತು.

ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಮಾಜಿ ಸಚಿವ ಶ್ರೀರಾಮುಲು, ಸಂಸದ ಪಿ.ಸಿ ಗದ್ದಿಗೌಡರ್, ರಾಜ್ಯಸಭಾ ಸದಸ್ಯ ನಾರಾಯಣ ಸಾ ಬಾಂಡಗೆ, ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ, ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್, ಶಾಸಕರಾದ ಜಗದೀಶ್ ಗುಡಗುಂಟಿ, ವಿಧಾನ ಪರಿಷತ್ ಸದಸ್ಯ ಪಿ.ಹೆಚ್.ಪೂಜಾರ್, ಹನುಮಂತ ನಿರಾಣಿ, ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ, ದೊಡ್ಡನಗೌಡ ಪಾಟೀಲ್,  ಶ್ರೀಕಾಂತ್ ಕುಲಕರ್ಣಿ,  ಎಂ.ಕೆ.ಪಟ್ಟಣಶೆಟ್ಟಿ, ರಾಜಶೇಖರ ಶೀಲವಂತ,  ಜಿ.ಎಸ್.ನ್ಯಾಮಗೌಡ, ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ್, ಸುಭಾಷ್ ಪಾಟೀಲ್ ಸೇರಿದಂತೆ ಪಕ್ಷದ ಮಾಜಿ ಶಾಸಕರು, ಪ್ರಮುಖರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

Waqf Bill: ವಕ್ಫ್ ತಿದ್ದುಪಡಿ ಕಾಯ್ದೆಗೆ ಸುಪ್ರೀಂಕೋರ್ಟ್ ಅಂಕುಶ: ತೀರ್ಪಿನಲ್ಲಿ ಹೇಳಿದ್ದೇನು