ಕಾಂಗ್ರೆಸ್‌ ಜನಪೀಡಕ ಸರ್ಕಾರ: ಗುಡುಗಿದ ಬಿವೈ ವಿಜಯೇಂದ್ರ

Sampriya
ಗುರುವಾರ, 17 ಏಪ್ರಿಲ್ 2025 (19:07 IST)
Photo Credit X
ಬಾಗಲಕೋಟೆ: ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ಇಂದು ಬಾಗಲಕೋಟೆಯಲ್ಲಿ ರಾಜ್ಯಾಧ್ಯಕ್ಷ  ಬಿವೈ ವಿಜಯೇಂದ್ರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

ಬಾಗಲಕೋಟೆಯಲ್ಲಿ ಇಂದು ರಾಜ್ಯದ ಕಡುಭ್ರಷ್ಟ ಹಾಗೂ ಜನವಿರೋಧಿ ಕಾಂಗ್ರೆಸ್ ಸರ್ಕಾರ ಎಂದು ಘೋಷಣೆ ಕೂಗಿ ಬಿಜೆಪಿ ಪ್ರತಿಭಟನೆ ನಡೆಸಿತು.  

ಸುಳ್ಳು ಆಮಿಷಗಳನ್ನೊಡ್ಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ನಾಡಿನ ಅಭಿವೃದ್ಧಿಯೆಡೆಗೆ ಒಂದೇ ಒಂದು ಹೆಜ್ಜೆ ಇಡಲಾರದೆ ಸರಣಿ ರೂಪದಲ್ಲಿ ಭ್ರಷ್ಟಾಚಾರದಲ್ಲಿ ಮುಳುಗಿ ತನ್ನ ಬರಿದಾಗಿರುವ ಬೊಕ್ಕಸ ತುಂಬಿಸಿಕೊಳ್ಳಲು ನಿತ್ಯವೂ ಒಂದಿಲ್ಲೊಂದು ಬೆಲೆ ಏರಿಕೆಯ ಬರೆ ಎಳೆಯುತ್ತಿರುವ ಜನವಿರೋಧಿ ನೀತಿಗಳನ್ನು ಖಂಡಿಸಲಾಯಿತು.

ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಮಾಜಿ ಸಚಿವ ಶ್ರೀರಾಮುಲು, ಸಂಸದ ಪಿ.ಸಿ ಗದ್ದಿಗೌಡರ್, ರಾಜ್ಯಸಭಾ ಸದಸ್ಯ ನಾರಾಯಣ ಸಾ ಬಾಂಡಗೆ, ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ, ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್, ಶಾಸಕರಾದ ಜಗದೀಶ್ ಗುಡಗುಂಟಿ, ವಿಧಾನ ಪರಿಷತ್ ಸದಸ್ಯ ಪಿ.ಹೆಚ್.ಪೂಜಾರ್, ಹನುಮಂತ ನಿರಾಣಿ, ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ, ದೊಡ್ಡನಗೌಡ ಪಾಟೀಲ್,  ಶ್ರೀಕಾಂತ್ ಕುಲಕರ್ಣಿ,  ಎಂ.ಕೆ.ಪಟ್ಟಣಶೆಟ್ಟಿ, ರಾಜಶೇಖರ ಶೀಲವಂತ,  ಜಿ.ಎಸ್.ನ್ಯಾಮಗೌಡ, ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ್, ಸುಭಾಷ್ ಪಾಟೀಲ್ ಸೇರಿದಂತೆ ಪಕ್ಷದ ಮಾಜಿ ಶಾಸಕರು, ಪ್ರಮುಖರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾರಿಗೆ ಅಡ್ಡ ಬಂದ ನಾಯಿ: ಕಾರು ಪಲ್ಟಿಯಾಗಿ ಜನಸ್ನೇಹಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸಾವು

ನನ್ನೊಂದಿಗೆ ಆಟವಾಡಲು ಬರಬೇಡಿ: ಕೇಂದ್ರದ ವಿರುದ್ಧ ಬ್ಯಾನರ್ಜಿ ಕಿಡಿ

ಈ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಲ್ಲ: ಮಲ್ಲಿಕಾರ್ಜುನ ಖರ್ಗೆ ಹಿಂಗದಿದ್ಯಾಕೆ

ದೇಶದ ಎರಡನೇ ಅತಿದೊಡ್ಡ ಮೀನು ಉತ್ಪಾದನಾ ರಾಜ್ಯವಾಗಿ ಗುಜರಾತ್

ಶಾಸಕರ ಖರೀದಿಗೆ ಹಣವಿದೆ, ರೈತರ ಸಂಕಷ್ಟಕ್ಕಿಲ್ಲ: ಜಗದೀಶ್ ಶೆಟ್ಟರ್ ಆಕ್ರೋಶ

ಮುಂದಿನ ಸುದ್ದಿ
Show comments