Webdunia - Bharat's app for daily news and videos

Install App

ಮಹದಾಯಿ ವಿವಾದಕ್ಕೆ ಕಾಂಗ್ರೆಸ್ ರಾಜಕೀಯ ಬಣ್ಣ: ಪ್ರತಾಪ್ ಸಿಂಹ್

Webdunia
ಶನಿವಾರ, 6 ಆಗಸ್ಟ್ 2016 (16:08 IST)
ಮಹದಾಯಿ ವಿವಾದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ರಾಜಕೀಯ ಬಣ್ಣ ಲೇಪಿಸುತ್ತಿದೆ ಎಂದು ಬಿಜೆಪಿ ಸಂಸದ ಪ್ರತಾಪ ಸಿಂಹ್ ಆರೋಪಿಸಿದ್ದಾರೆ.
 
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹದಾಯಿ ವಿವಾದಕ್ಕೆ ಸಂಬಂಧಿಸಿದಂತೆ ಈಗಾಗಲೇ ರಾಜ್ಯಾಧ್ಯಕ್ಷರೊಂದಿಗೆ ಚರ್ಚಿಸಿದ್ದೇವೆ. ನಾಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ನೇತೃತ್ವದಲ್ಲಿ ಸಭೆ ನಡೆಸಿ ಸೂಕ್ತ ತೀರ್ಮಾನ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.
 
ಮಹದಾಯಿ ನ್ಯಾಯಾಧೀಕರಣವನ್ನು ಸ್ಥಾಪನೆ ಮಾಡಿದ್ದೇ ಕಾಂಗ್ರೆಸ್. ಈ ವಿಚಾರದಲ್ಲಿ ಅವರು  ರಾಜಕೀಯ ಬಣ್ಣ ಲೇಪಿಸುತ್ತಿದ್ದಾರೆ. ಮಧ್ಯಂತರ ಅರ್ಜಿಯನ್ನು ಕಾನೂನು ಬಾಹಿರವಾಗಿ ಸಲ್ಲಿಸಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
 
ಮಹದಾಯಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಗೋವಾ ಹಾಗೂ ಮಹಾರಾಷ್ಟ್ರ ಮುಖ್ಯಮಂತ್ರಿಯವರ ಮನವೊಲಿಸಲು ಬಿಜೆಪಿ ಬದ್ಧವಾಗಿದೆ. ವಿಪಕ್ಷ ಕಾಂಗ್ರೆಸ್ ನಾಯಕರನ್ನು ಮನವೊಲಿಸಲು ನೀವು ಸಿದ್ದರಾಗಿರಿ. ಎಲ್ಲರು ಪಕ್ಷ ಭೇದ ಮರೆತು ಹೋರಾಟ ಮಾಡಬೇಕಿದೆ ಎಂದು ಬಿಜೆಪಿ ಸಂಸದ ಪ್ರತಾಪ ಸಿಂಹ್ ಹೇಳಿದರು.
 
 
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನಕ್ಕೆ ಡಿಕ್ಕಿ ಹೊಡೆದ ಹಕ್ಕಿ, ತಪ್ಪಿದ ಅವಘಡ‌

ಜಗನ್ನಾಥನ ದರ್ಶನಕ್ಕಾಗಿ ಡೊನಾಲ್ಡ್‌ ಟ್ರಂಪ್ ಆಹ್ವಾನವನ್ನೇ ತಿರಸ್ಕರಿಸಿದೆ: ನರೇಂದ್ರ ಮೋದಿ

ಹೀಗಾದ್ರೆ ಯುವಕರ ಕತೆ ಏನು, ಮಗನಿಗೆ ನಿಶ್ಚಿಯವಾಗಿದ್ದ ಯುವತಿಯನ್ನೇ ಕೈಹಿಡಿದ ತಂದೆ

ಕ್ರೈಸ್ತ ಧರ್ಮಕ್ಕೆ ಮತಾಂತರವಾದರೆ ಆರೋಗ್ಯದಲ್ಲಿ ಚೇತರಿಕೆ: ಮಹಿಳೆಗೆ ಒತ್ತಡ, ದೂರು

ಏರ್‌ ಇಂಡಿಯಾ ದುರಂತದ ಬಳಿಕ ವಿಮಾನದಲ್ಲಿ ಈ ಸೀಟಿಗಾಗಿ ಹೆಚ್ಚಿದ ಬೇಡಿಕೆ

ಮುಂದಿನ ಸುದ್ದಿ
Show comments