Publish Date: Tue, 10 Sep 2024 (16:38 IST)
Updated Date: Tue, 10 Sep 2024 (16:40 IST)
ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಸಿಎಂ ಆಕಾಂಕ್ಷಿಗಳ ಪಟ್ಟಿ ಬಾಲಂಗೋಚಿಯಂತೆ ಬೆಳೆಯುತ್ತಲೇ ಇದೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ವ್ಯಂಗ್ಯ ಮಾಡಿದ್ದಾರೆ.
ಕಾಂಗ್ರೆಸ್‌ನ ಹಿರಿಯ ಮುಖಂಡ ಆರ್‌ವಿ ದೇಶಪಾಂಡೆ, ಸಚಿವರಾದ ಎಂಬಿ ಪಾಟೀಲ್, ಸತೀಶ್ ಜಾರಕಿಹೊಳಿ ಸಿಎಂ ಕುರ್ಚಿ ರೇಸ್‌ನಲ್ಲಿರುವ ಬೆನ್ನಲ್ಲೇ ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ಸಚಿವ ಶರಣಬಸಪ್ಪಗೌಡ ಕೂಡಾ ಸಿಎಂ ಆಗುವ ಆಸೆಯನ್ನು ವ್ಯಕ್ತಪಡಿಸಿದ್ದರು. ಇವರಿಬ್ಬರ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೂ ಕಾರಣವಾಗಿದೆ.
ಇದೀಗ ಈ ಸಂಬಂಧ ಆರ್.ಅಶೋಕ್ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.
ಸಿಎಂ ರೇಸ್ ಗೆ ಈಗ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಶ್ರೀ ಬಸವರಾಜ ರಾಯರೆಡ್ಡಿ ಹಾಗು ಸಚಿವ ಶರಣಬಸಪ್ಪಗೌಡ ದರ್ಶನಾಪುರ ಅವರುಗಳು ಹೊಸದಾಗಿ ಸೇರ್ಪಡೆಯಾಗಿದ್ದಾರೆ.
ಒಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯನವರ ಬೀಳ್ಕೊಡುಗೆಗೆ ಕಾಂಗ್ರೆಸ್ ಪಕ್ಷದಲ್ಲಿ ಭರ್ಜರಿ ತಯಾರಿ ನಡೆದಿದೆ.