ಸಿಎಂ ಕುರ್ಚಿ ಗುದ್ದಾಟದ ನಡುವೆಯೂ ಗುಟ್ಟಾಗಿ ಮಾತುಕತೆ ನಡೆಸಿದ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್‌

Sampriya
ಗುರುವಾರ, 17 ಏಪ್ರಿಲ್ 2025 (15:05 IST)
Photo Credit X
ಬೆಂಗಳೂರು: ಕೇಂದ್ರದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ದಿಢೀರ್ ಅಡುಗೆ ಅನಿಲ ಬೆಲೆ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಭಾಗವಹಿಸಿದ್ದರು. ಸಿಎಂ ಕುರ್ಚಿ ಗುದ್ದಾಟದ ನಡುವೆಯೂ ಈ ಇಬ್ಬರು ನಾಯಕರು ದೀರ್ಘ ಮಾತುಕತೆಯಲ್ಲಿ ತೊಡಗಿದ್ದು ಗಮನ ಸೆಳೆಯಿತು.

ನಗರದಲ್ಲಿಂದು ಫ್ರೀಡಂ ಪಾರ್ಕಿನ ಮೈದಾನದಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲ ಸೇರಿದಂತೆ ಕೆಪಿಸಿಸಿ ಕಾರ್ಯಾಧ್ಯಕ್ಷರು, ಶಾಸಕರು, ಸಂಸದರು ಹಾಗೂ ಕಾರ್ಯಕರ್ತರು ಅಪಾರ ಸಂಖ್ಯೆಯಲ್ಲಿ ಭಾಗಿಯಾಗಿ, ಬಿಜೆಪಿಗೆ ತಿರುಗೇಟು ನೀಡಿದರು.

ಕೇಂದ್ರದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬರುವ ಮುನ್ನ ಮನಮೋಹನ್ ಸಿಂಗ್ ಇದ್ದಾಗ ಅಗತ್ಯ ವಸ್ತುಗಳ ಬೆಲೆ ಎಷ್ಟಿತ್ತು ಈಗ ಎಷ್ಟಾಗಿದೆ ಎನ್ನುವುದನ್ನು ಅರಿಯಬೇಕು. ಅಚ್ಛೇದಿನ್ ಬರಲಿದೆ, ನಾವು ಅಧಿಕಾರಕ್ಕೆ ಬಂದ ಕೇವಲ ೧೦೦ ದಿನಗಳಲ್ಲಿ ಕಪ್ಪು ಹಣ ವಾಪಸ್ ತಂದು ೧೫ ಲಕ್ಷ ರೂ. ಪ್ರತಿ ಖಾತೆಗೆ ಹಾಕುತ್ತೇವೆ ಎಂದವರು, ೩ನೇ ಅವಧಿಗೆ ಅಧಿಕಾರಕ್ಕೆ ಬಂದರೂ ಅದರ ಬಗ್ಗೆ ಚಕಾರವಿಲ್ಲ.

ಮನಬಂದಂತೆ ಇಂಧನ ಬೆಲೆ ಹೆಚ್ಚಿಸುವುದರಿಂದ ಸಾರಿಗೆ, ಸರಕು ಸಾಗಣೆ, ವ್ಯಾಪಾರ ವಹಿವಾಟು, ಕೃಷಿ, ಕೈಗಾರಿಕೆ ಸೇರಿ ಇನ್ನಿತರೆ ವಲಯಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಇದರಿಂದ ಜನಸಾಮಾನ್ಯರು ಮತ್ತಷ್ಟು ಸಂಕಷ್ಟ ಎದುರಿಸುವಂತಾಗಿದೆ ಎಂದು ಸಚಿವರು ದೂರಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಮಹದೇವಪ್ಪರನ್ನು ಭೇಟಿಯಾಗಿ ನವೆಂಬರ್ ಕ್ರಾಂತಿ ಬಗ್ಗೆ ಪರಮೇಶ್ವರ್ ಸ್ಫೋಟಕ ಹೇಳಿಕೆ

Rain Alert, ದೇಶದ ಈ ಭಾಗಕ್ಕೆ ಚಂಡಮಾರುತ ಅಪ್ಪಳಿಸುವ ಮುನ್ಸೂಚನೆ

ಬಿಹಾರದಲ್ಲೂ ಇಂಡಿಯಾ ಒಕ್ಕೂಟದ ಫ್ರೀ ಗ್ಯಾರಂಟಿ ಆಫರ್

ಆರ್ ಎಸ್ಎಸ್ ವಿರುದ್ಧ ಸರ್ಕಾರದ ಕುತಂತ್ರಕ್ಕೆ ತಕ್ಕ ಉತ್ತರ ಸಿಕ್ಕಿದೆ: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments