Publish Date: Mon, 02 Jan 2023 (14:43 IST)
Updated Date: Mon, 02 Jan 2023 (14:46 IST)
ಡೆತ್ ನೋಟ್ ಬರೆದಿಟ್ಟು ಪ್ರದೀಪ್ ಆತ್ಮಹತ್ಯೆ ಮಾಡಿಕೊಂಡಿದ್ದು,ಪ್ರದೀಪ್ ಪ್ರಕರಣದ ತನಿಖೆಗೆ ಕಾಂಗ್ರೆಸ್ ಆಗ್ರಹಿಸಿದೆ.ಹೀಗಾಗಿ ರಾಜಭವನದ ಎದುರು ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ.
ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಭವನದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಧರಣಿ ನಡೆಸಿದ್ದು,ಶಾಸಕ ಅರವಿಂದ ಲಿಂಬಾವಳಿ ಹೆಸರು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ಬಹಳ ಸೂಕ್ಷ್ಮವಾಗಿದೆ.ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಳ್ತಿದ್ದಾರೆ.ಪ್ರಕರಣದ ಸತ್ಯಾಸತ್ಯತೆ ಹೊರಗೆಬರಬೇಕು.ಹಾಗಾಗಿ ನಿಷ್ಪಕ್ಷಪಾತ ತನಿಖೆಯಾಗಬೇಕು.ಶಾಸಕರ ಹೆಸರು ಇರೋದ್ರಿಂದ ಅನುಮಾನವಿದೆ.ಕೂಡಲೇ ಲಿಂಬಾವಳಿಯವರನ್ನ ಬಂಧಿಸಬೇಕು.ಪ್ರದೀಪ್ ಕುಟುಂಬಕ್ಕೆ ನ್ಯಾಯ ಕೊಡಿಸಬೇಕು ಎಂದು ಕಾಂಗ್ರೆಸ್ ಮುಖಂಡ ಮನೋಹರ್ ಒತ್ತಾಯ ಮಾಡಿದ್ದಾರೆ..