ಜೋರಾಗಿದೆ ಕಾಂಗ್ರೆಸ್ ಪ್ರತಿಭಟನೆ ...!!!!

Webdunia
ಗುರುವಾರ, 21 ಜುಲೈ 2022 (14:13 IST)
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯನ್ನು ಜಾರಿ ನಿರ್ದೇಶನಾಲಯ ವಿಚಾರಣೆ ಮಾಡುತ್ತಿರುವುದನ್ನು ವಿರೋಧಿಸಿ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಗುರುವಾರ ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿದ್ದಾರೆ. ರಾಜ್ಯದಲ್ಲಿಯೂ ಕಾಂಗ್ರೆಸ್ ನಾಯಕರು ಬೆಂಗಳೂರು ಫ್ರೀಡಂಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ (ಕೆಪಿಸಿಸಿ) ಡಿ. ಕೆ. ಶಿವಕುಮಾರ್‌, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಪ್ರತಿಭಟನೆ ಆರಂಭವಾಗಿದೆ. ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ನಗರದ ಸ್ವಾಂತ್ರ್ಯ ಉದ್ಯಾನದಿಂದ ಹಿಡಿದು ಕೆ. ಆರ್. ವೃತ್ತ, ವಿಧಾನಸೌಧ ಮುಂದಿನ ರಸ್ತೆ ಮೂಲಕ ರಾಜಭವನದ ತನಕ ಪ್ರತಿಭಟನಾ ಮೆರವಣಿಗೆ ನಡೆಸಲಿದ್ದಾರೆ.
 
ಈಗಾಗಲೇಸ್ವಾತಂತ್ರ್ಯ ಉದ್ಯಾನದಲ್ಲಿ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು ಜಮಾಯಿಸಿದ್ದು, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಿದ್ದಾರೆ. ಇನ್ನೇನು ಪ್ರತಿಭಟನಾ ಮೆರವಣಿಗೆ ಆರಂಭವಾಗಲಿದೆ.
 
ಪ್ರತಿಭಟನೆ ವೇಳೆ ಮಾತನಾಡಿದ ಡಿ. ಕೆ. ಶಿವಕುಮಾರ್‌, "ಜಾರಿ ನಿರ್ದೇಶನಾಲಯದ ಅಧಿಕಾರಿಗಳು ವಿಚಾರಣೆಗೆ ಕರೆಸುವ ಅಗತ್ಯವಿಲ್ಲ, ಅವರು ಸುಮ್ಮನೆ ಕಿರುಕುಳ ನೀಡುತ್ತಿದ್ದಾರೆ. ಇದು ರಾಜಕೀಯ ಸೇಡು. ಬಿಜೆಪಿ ಅವರಿಗೆ ಭಯವಿರುವ ಕಾರಣ. ಕಾಂಗ್ರೆಸ್ ನಾಯಕರಿಗೆ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ" ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಮತ್ತಷ್ಟು ಕಳಪೆ ಮಟ್ಟಕ್ಕೆ ಇಳಿದ ವಾಯು ಗುಣಮಟ್ಟ

ಕರೂರು ಕಾಲ್ತುಳಿತದ ಬಳಿಕ ಬಿಗಿ ಭದ್ರತೆಯಲ್ಲಿ ಚುನಾವಣಾ ರ‍್ಯಾಲಿ ಶುರು ಮಾಡಿದ ನಟ ವಿಜಯ್‌

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಕುರ್ಚಿ ಫೈಟ್ ಗೆ ನಾನೂ ಇದ್ದೀನಿ ಎಂದು ಎಂಟ್ರಿ ಕೊಟ್ಟವರು ಯಾರು

ಪ್ರಧಾನಿ ನರೇಂದ್ರ ಮೋದಿ ಉಡುಪಿಗೆ ಭೇಟಿಗೆ ದಿನಗಣನೆ: ರಾಜ್ಯ ಪ್ರವಾಸದ ಕಂಪ್ಲೀಟ್‌ ವೇಳಾಪಟ್ಟಿ ಇಲ್ಲಿದೆ

ಡಿಕೆಶಿ ಇಷ್ಟೆಲ್ಲಾ ಮಾಡೋ ಬದಲು ಅಮಿತ್ ಶಾ ಜೊತೆಗಿರುವ ಫೋಟೋ ಹಾಕಿದ್ರೆ ಸಾಕಾಗ್ತಿತ್ತು

ಮುಂದಿನ ಸುದ್ದಿ
Show comments